ಬೆಂಗಳೂರು: ಇದೇ ಮಾರ್ಚ್.22ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಈಗಾಗಲೇ ನಿಗದಿಯಾಗಿರುವ ಯಾವುದೇ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಈಗಾಗಲೇ ಮಾರ್ಚ್.22ರಂದು 7, 8 ಮತ್ತು 9ನೇ ತರಗತಿ ಪರೀಕ್ಷೆಗಳು ನಿಗದಿಯಾಗಿವೆ. ಕರ್ನಾಟಕ ಬಂದ್ ಎಂದು ಈಗ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲು ಸಾಧ್ಯವಿಲ್ಲ. ಒಂದು ವೇಳೆ ಬಂದ್ ಇದ್ದರೂ ಯಾವುದೇ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲು ಸಾಧ್ಯವಿಲ್ಲ. ಪರೀಕ್ಷೆ ಅದರ ಪಾಡಿಗೆ ಅದು ನಡೆಯುತ್ತದೆ ಎಂದರು.
ಇನ್ನು ಬಂದ್ ಮಾಡುವ ಹೋರಾಟಗಾರರು ಯಾರೂ ಕೂಡ ಮಕ್ಕಳಿಗೆ ಎಕ್ಸಾಂಗೆ ಹೋಗಬೇಡಿ ಎಂದು ಹೇಳಲ್ಲ. ಮಕ್ಕಳು ಗೊಂದಲ ಆಗೋದು ಬೇಡ. ಈಗಾಗಲೇ ವೇಳಾಪಟ್ಟಿ ಸಿದ್ಧತೆ ಮಾಡಿ ಪ್ರಕಟಿಸಿದ್ದೇವೆ. ವೇಳಾಪಟ್ಟಿ ಬದಲಾವಣೆ ಆದರೆ ಕಷ್ಟ ಆಗುತ್ತದೆ ಎಂದರು.
ಬೆಂಗಳೂರು : ದೆಹಲಿಯಿಂದ ರಾಜಭವನಕ್ಕೆ ಫೋನ್ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾಡಿದ ಆರೋಪವು ವಿಧಾನಸಭೆಯಲ್ಲಿ ಆಡಳಿತ ಮತ್ತು…
ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…
ಬೆಂಗಳೂರು: ಇತ್ತೀಚೆಗೆ ಕಾರು ಅಪಘಾತದಲ್ಲಿ ಮೃತಪಟ್ಟ ಐಎಎಸ್ ಅಧಿಕಾರಿ ದಿ.ಮಹಾಂತೇಶ್ ಬೀಳಗಿ ಅವರ ಪುತ್ರಿಗೆ ಸರ್ಕಾರಿ ಉದ್ಯೋಗ ಲಭಿಸಿದೆ. ಸಿಎಂ…
ಮಂಡ್ಯ: 2026ನೇ ಸಾಲಿನ ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಂಕೇಗೌಡ ಅವರನ್ನು ಸನ್ಮಾನಿಸಿ…
ನವದೆಹಲಿ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿಯ ಭೀಕರ ವಿಮಾನ ಅಪಘಾತದ ಕುರಿತು ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ…
ಮಹಾರಾಷ್ಟ್ರ: ಡಿಸಿಎಂ ಅಜಿತ್ ಪವಾದ ಅವರ ಸಾವು ದುರದೃಷ್ಟಕರ. ಅವರ ನಿಧನಕ್ಕೆ ಕಾರಣವಾದ ವಿಮಾನ ದುರಂತದ ಬಗ್ಗೆ ತನಿಖೆ ನಡೆಸಲಾಗುವುದು…