ಬೆಂಗಳೂರು: ನೆರೆಯ ರಾಜ್ಯ ಮಹಾರಾಷ್ಟ್ರದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ, ಬಸ್‌ಗಳಿಗೆ ಮಸಿ ಬಳಿದು ಪುಂಡಾಟಿಕೆ ಮೆರೆದಿರುವುದನ್ನು ಖಂಡಿಸಿ ಇದೇ ಮಾರ್ಚ್.22ರಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ.
ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮಾರ್ಚ್.22ರಂದು ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ.
ಹೀಗಾಗಿ ಅಂದು ರಾಜ್ಯದಲ್ಲಿ ಏನಿರುತ್ತೆ-ಏನಿರಲ್ಲ? ಎಂಬುದರ ವಿವರ ಈ ಕೆಳಕಂಡಂತಿದೆ.
ಕರ್ನಾಟಕ ಬಂದ್‌ಗೆ ಓಲಾ, ಊಬರ್, ಆಟೋ ಸಂಘಗಳು ಕೂಡ ಬೆಂಬಲ ನೀಡಿವೆ. ಹೀಗಾಗಿ ಅಂದು ಓಲಾ, ಊಬರ್ ಹಾಗೂ ಆಟೋಗಳು ರಸ್ತೆಗಳಿಯುವುದಿಲ್ಲ. ಅದೇ ರೀತಿಯಾಗಿ ಕಾರ್ಮಿಕ ಪರಿಷತ್ ಸಂಪೂರ್ಣ ಬೆಂಬಲ ನೀಡಿದೆ.
ಇನ್ನು ಹೋಟೆಲ್ ಅಸೋಸಿಯೇಷನ್‌ನಿಂದ ನೈತಿಕ ಬೆಂಬಲ ನೀಡಿದ್ದು, ಬಂದ್ ದಿನ ಎಂದಿನಂತೆ ಹೋಟೆಲ್‌ಗಳು ತೆರೆದಿರುತ್ತವೆ.
ಇನ್ನು ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್‌ಗಳು ಎಂದಿನಂತೆ ಸಂಚರಿಸಲಿದ್ದು, ದೂರದ ಊರಿಗೆ ಪ್ರಯಾಣ ಬೆಳೆಸುವ ಜನರು ಯಾವುದೇ ಆತಂಕವಿಲ್ಲದೇ ಪ್ರಯಾಣ ಮಾಡಬಹುದಾಗಿದೆ.
ಅಂದಿನ ದಿನ ಆಸ್ಪತ್ರೆ, ಮೆಡಿಕಲ್, ಹಾಲು, ಅಗತ್ಯವಸ್ತುಗಳು, ಮೆಟ್ರೋ, ಕೆಎಸ್‌ಆರ್‌ಟಿಸಿ ಬಸ್‌ಗಳು ಇರುತ್ತವೆ. ಬಂದ್ ದಿನ ಓಲಾ, ಊಬರ್, ಆಟೋ ರಸ್ತೆಗಳಿಯಲ್ಲ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…