ರಾಜ್ಯ

ಮಾರ್ಚ್.‌22ರಂದು ಕರ್ನಾಟಕ ಬಂದ್‌ ಆಗೋದು ಪಕ್ಕಾ: ಅಂದು ಏನಿರುತ್ತೆ-ಏನಿರಲ್ಲ?

ಬೆಂಗಳೂರು: ನೆರೆಯ ರಾಜ್ಯ ಮಹಾರಾಷ್ಟ್ರದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ, ಬಸ್‌ಗಳಿಗೆ ಮಸಿ ಬಳಿದು ಪುಂಡಾಟಿಕೆ ಮೆರೆದಿರುವುದನ್ನು ಖಂಡಿಸಿ ಇದೇ ಮಾರ್ಚ್.‌22ರಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ.

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ಮಾರ್ಚ್.‌22ರಂದು ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ.

ಹೀಗಾಗಿ ಅಂದು ರಾಜ್ಯದಲ್ಲಿ ಏನಿರುತ್ತೆ-ಏನಿರಲ್ಲ? ಎಂಬುದರ ವಿವರ ಈ ಕೆಳಕಂಡಂತಿದೆ.

ಕರ್ನಾಟಕ ಬಂದ್‌ಗೆ ಓಲಾ, ಊಬರ್‌, ಆಟೋ ಸಂಘಗಳು ಕೂಡ ಬೆಂಬಲ ನೀಡಿವೆ. ಹೀಗಾಗಿ ಅಂದು ಓಲಾ, ಊಬರ್‌ ಹಾಗೂ ಆಟೋಗಳು ರಸ್ತೆಗಳಿಯುವುದಿಲ್ಲ. ಅದೇ ರೀತಿಯಾಗಿ ಕಾರ್ಮಿಕ ಪರಿಷತ್‌ ಸಂಪೂರ್ಣ ಬೆಂಬಲ ನೀಡಿದೆ.

ಇನ್ನು ಹೋಟೆಲ್‌ ಅಸೋಸಿಯೇಷನ್‌ನಿಂದ ನೈತಿಕ ಬೆಂಬಲ ನೀಡಿದ್ದು, ಬಂದ್‌ ದಿನ ಎಂದಿನಂತೆ ಹೋಟೆಲ್‌ಗಳು ತೆರೆದಿರುತ್ತವೆ.

ಇನ್ನು ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್‌ಗಳು ಎಂದಿನಂತೆ ಸಂಚರಿಸಲಿದ್ದು, ದೂರದ ಊರಿಗೆ ಪ್ರಯಾಣ ಬೆಳೆಸುವ ಜನರು ಯಾವುದೇ ಆತಂಕವಿಲ್ಲದೇ ಪ್ರಯಾಣ ಮಾಡಬಹುದಾಗಿದೆ.

ಅಂದಿನ ದಿನ ಆಸ್ಪತ್ರೆ, ಮೆಡಿಕಲ್‌, ಹಾಲು, ಅಗತ್ಯವಸ್ತುಗಳು, ಮೆಟ್ರೋ, ಕೆಎಸ್‌ಆರ್‌ಟಿಸಿ ಬಸ್‌ಗಳು ಇರುತ್ತವೆ. ಬಂದ್‌ ದಿನ ಓಲಾ, ಊಬರ್‌, ಆಟೋ ರಸ್ತೆಗಳಿಯಲ್ಲ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…

2 hours ago

ಓದುಗರ ಪತ್ರ: ಬಳಸಿದ ಅಡುಗೆ ಎಣ್ಣೆ: ಯೋಜನೆ ಪ್ರಶಂಸನೀಯ

ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…

3 hours ago

ಓದುಗರ ಪತ್ರ: ಇದೇನು ಪಾದಚಾರಿ ರಸ್ತೆಯೋ ಅಥವಾ…?

ಅನ್ನ ಬೆಂದಿದೆಯೋ ಇಲ್ಲವೋ ಎಂಬುದನ್ನುಪರೀಕ್ಷಿಸಲು ಪಾತ್ರೆಯ ಅನ್ನವನ್ನು ಮುಟ್ಟಿ ನೋಡಬೇಕಿಲ್ಲ. ಒಂದು ಅಗುಳನ್ನು ಪರೀಕ್ಷಿಸಿದರೆ ಸಾಕು. ಅಂತೆಯೇ ಮೈಸೂರಿನಲ್ಲಿ ಸಂಚಾರ…

3 hours ago

ಓದುಗರ ಪತ್ರ: ನಕಲಿ ಔಷಧಿಗಳ ಜಾಲದ ತಡೆಗೆ ಕಠಿಣ ಕ್ರಮ ಕೈಗೊಳ್ಳಿ

ಮಾರುಕಟ್ಟೆಯಲ್ಲಿ ನಕಲಿ ಔಷಧಿಗಳ ಮಾರಾಟ ಹೆಚ್ಚಾಗುತ್ತಿರುವುದು ಅಂತಕ ಮೂಡಿಸಿದೆ. ಬ್ರಾಂಡೆಡ್ ಹೆಸರಿನಲ್ಲಿ ಸೂಕ್ತ ಪ್ರಮಾಣದಲ್ಲಿ ರಾಸಾಯನಿಕಗಳಿಲ್ಲದ ಅಥವಾ ಹಾನಿಕಾರಕ ಘಟಕಾಂಶಗಳಿರುವ…

3 hours ago

ಹರಿಕಥೆ ಮೇಷ್ಟ್ರು ಮಾದೇಶ ಇನ್ನಿಲ್ಲ

ಗುಂಡ್ಲುಪೇಟೆ : ತಾಲ್ಲೂಕಿನ ಬಾಚಹಳ್ಳಿಗ್ರಾಮದ ನಿವಾಸಿ, ಹರಿಕಥೆ ಮೇಷ್ಟ್ರು ಮಾದೇಶ(55) ಅವರು ಶನಿವಾರ ರಾತ್ರಿ ನಿಧನರಾದರು. ಚಿಕ್ಕನಿಂದಲೇ ಕಲೆಯನ್ನು ಮೈಗೂಡಿಸಿಕೊಂಡಿದ್ದ…

3 hours ago

ಜೆನ್ ಝೀ ಶಕ್ತಿಗೆ ಹೆದರಿದ ಕೇಂದ್ರದ ಎನ್‌ಡಿಎ ಸರ್ಕಾರ

ದೆಹಲಿ ಕಣ್ಣೋಟ, ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಜನರು ಮತ್ತು ಯುವಕರು ದಿಕ್ಕೆಟ್ಟ ಆಡಳಿತದ ವಿರುದ್ಧ ಸಿಡಿದು ಬೀದಿಗಿಳಿದಿದ್ದಾರೆ…

3 hours ago