ರಾಜ್ಯ

ನೀಟ್‌ ರದ್ದತಿ, ಒಂದು ರಾಷ್ಟ್ರ ಒಂದು ಚುನಾವಣೆ ವಿರೋಧಿಸಿ ವಿಧಾನಸಭೆಯಲ್ಲಿ ನಿರ್ಣಯ

ಬೆಂಗಳೂರು: ವಿಧಾನಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ನಾಲ್ಕು ನಿರ್ಣಯಗಳು ಮಂಡನೆ ಆಗಿದ್ದು, ಎಲ್ಲವೂ ಅಂಗೀಕಾರ ಆಗಿವೆ.

ಬಿಜೆಪಿ-ಜೆಡಿಎಸ್‌ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿರುವಾಗಲೇ ಕೇಂದ್ರ ಸರ್ಕಾರದ ವಿರುದ್ಧ ನಾಲ್ಕು ನಿರ್ಣಯಗಳನ್ನು ಮಂಡಿಸಿ, ಸದನದ ಅಂಗೀಕಾರ ಪಡೆಯಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಪಸ್ಥಿತಿಯಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್‌ ಅವರು, ಎರಡು ನಿರ್ಣಯ ಮಂಡಿಸಿ ಅಂಗೀಕಾರ ಪಡೆದಿದ್ದಾರೆ.

ಒಂದು ರಾಷ್ಟ್ರ ಒಂದು ಚುನಾವಣೆ ವಿರೋಧಿಸಿ, ಆ ವ್ಯವಸ್ಥೆ ಬೇಡ ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ನಿರ್ಣಯ ಕೈಗೊಳ್ಳಲಾಯಿತು.

ಇನ್ನು ನೀಟ್‌ ವಿರೋಧಿಸಿ, ನೀಟ್‌ ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್‌ ಪಾಟೀಲ್‌ ಅವರು ನಿರ್ಣಯ ಮಂಡಿಸಿ ಸದನದ ಅಂಗೀಕಾರ ಪಡೆದರು.

1971ರ ಜನಗಣತಿ ಆಧರಿಸಿಯೇ ಲೋಕಸಭಾ, ವಿಧಾನಸಭೆ ಕ್ಷೇತ್ರಗಳ ಪುನರ್‌ ವಿಂಗಡಣೆ ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ ನಿರ್ಣಯಕ್ಕೆ ಅಂಗೀಕಾರ ಪಡೆಯಲಾಯಿತು.

ಬಳಿಕ ನಾಲ್ಕನೆಯದಾಗಿ ಪಾರಂಪರಿಕ ಅರಣ್ಯ ವಾಸಿಗಳ ನಿಯಮಗಳನ್ನು ಮಾರ್ಪಾಡು ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ನಿರ್ಣಯ ಮಂಡಿಸಿ, ಸದನದ ಅಂಗೀಕಾರ ಪಡೆದರು.

ನಿರ್ಣಯ ಅಂಗೀಕಾರ ವೇಳೆ ಬಿಜೆಪಿ ನಾಯಕರು ರೊಚ್ಚಿಗೆದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದರ ಬಗ್ಗೆ ಸದನದಲ್ಲಿ ಸಂಪೂರ್ಣ ಚರ್ಚೆ ನಡೆಸಬೇಕು. ಇದನ್ನು ಮುಂದಕ್ಕೆ ಹಾಕಿ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ಸದನದಲ್ಲೇ ಒತ್ತಾಯಿಸಿದರು.

ಆದರೂ ಆರ್.ಅಶೋಕ್‌ ಮಾತಿಗೆ ತಲೆಕೆಡಿಸಿಕೊಳ್ಳದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ, ಕೇಂದ್ರದ ವಿರುದ್ಧ ನಾಲ್ಕು ನಿರ್ಣಯಗಳನ್ನು ಮಂಡನೆ ಮಾಡಿ ನಿರ್ಣಯ ಪಡೆಯಿತು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಾಲ್ದಾರೆ ಅರಣ್ಯ ಮಾರ್ಗದಲ್ಲಿ ಪ್ರವಾಸಿಗರಿಗೆ ಹುಲಿ ದರ್ಶನ

ಮಡಿಕೇರಿ: ಸಿದ್ದಾಪುರದಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ಮಾಲ್ದಾರೆ ಗ್ರಾಮ ಸಮೀಪದ ಕುಶಾಲನಗರ ಹಾಗೂ ದೇವಮತಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರಿಗೆ ಹುಲಿಯೊಂದು…

15 mins ago

ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ: ಎಸ್.ಟಿ.ಸೋಮಶೇಖರ್‌

ಬೆಂಗಳೂರು: ನಾನು ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ. ಕಾಂಗ್ರೆಸ್‌ಗೆ ಹೋಗುತ್ತೇನೆ ಎಂದು ಶಾಸಕ ಎಸ್.ಟಿ.ಸೋಮಶೇಖರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

1 hour ago

ಬಿಹಾರದ ನಳಂದಾ ದೇಗುಲದಲ್ಲಿ ಕಾಲ್ತುಳಿತ: 8 ಮಂದಿ ಸಾವು

ನಳಂದಾ: ಬಿಹಾರದ ನಳಂದಾ ಜಿಲ್ಲೆಯ ಶೀತಲಾ ದೇವಸ್ಥಾನದ ಧಾರ್ಮಿಕ ಸಮಾರಂಭವೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಂದಿ ಮಹಿಳೆಯರು ಸಾವನ್ನಪ್ಪಿದ್ದಾರೆ.…

1 hour ago

ಕೌಟುಂಬಿಕ ಕಲಹ: ಬೆಂಗಳೂರಿನಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊತ್ತನೂರು ಪೊಲೀಸ್‌ ಠಾಣೆ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ…

2 hours ago

ಉಜ್ವಲ ಹೋಯ್ತು, ಈಗ ಸೌದೆ ಯೋಜನೆ ಸ್ಟಾರ್ಟ್‌: ಡಿಸಿಎಂ ಡಿ.ಕೆ.ಶಿವಕುಮಾರ್‌ ವಾಗ್ದಾಳಿ

ಬೆಂಗಳೂರು: ಸೌದೆ ಮುಕ್ತ ಭಾರತ ಮಾಡ್ತೀವಿ ಎಂದು ಹೇಳಿ ಎಲ್ಲಾ ಕಡೆ ಗ್ಯಾಸ್‌ ತಂದರು. ಹಳ್ಳಿಗಳಲ್ಲೂ ಗ್ಯಾಸ್‌ ಬಂತು. ಈಗ…

2 hours ago

ಇರಾನ್‌ನ ಇಸ್ಫಹಾನ್‌ನಲ್ಲಿ ಸರಣಿ ಸ್ಫೋಟ

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ತನ್ನ ಪ್ರತೀಕಾರ ಮುಂದುವರಿಸಿದೆ. ಇರಾನ್‌ನ ಇಸ್ಪಹಾನ್‌ ನಗರದಲ್ಲಿರುವ ಮಿಲಿಟರಿ ಕೇಂದ್ರದ ಮೇಲೆ…

3 hours ago