ಬೆಂಗಳೂರು: ವಿಧಾನಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ನಾಲ್ಕು ನಿರ್ಣಯಗಳು ಮಂಡನೆ ಆಗಿದ್ದು, ಎಲ್ಲವೂ ಅಂಗೀಕಾರ ಆಗಿವೆ.
ಬಿಜೆಪಿ-ಜೆಡಿಎಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿರುವಾಗಲೇ ಕೇಂದ್ರ ಸರ್ಕಾರದ ವಿರುದ್ಧ ನಾಲ್ಕು ನಿರ್ಣಯಗಳನ್ನು ಮಂಡಿಸಿ, ಸದನದ ಅಂಗೀಕಾರ ಪಡೆಯಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಪಸ್ಥಿತಿಯಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಅವರು, ಎರಡು ನಿರ್ಣಯ ಮಂಡಿಸಿ ಅಂಗೀಕಾರ ಪಡೆದಿದ್ದಾರೆ.
ಒಂದು ರಾಷ್ಟ್ರ ಒಂದು ಚುನಾವಣೆ ವಿರೋಧಿಸಿ, ಆ ವ್ಯವಸ್ಥೆ ಬೇಡ ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ನಿರ್ಣಯ ಕೈಗೊಳ್ಳಲಾಯಿತು.
ಇನ್ನು ನೀಟ್ ವಿರೋಧಿಸಿ, ನೀಟ್ ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ನಿರ್ಣಯ ಮಂಡಿಸಿ ಸದನದ ಅಂಗೀಕಾರ ಪಡೆದರು.
1971ರ ಜನಗಣತಿ ಆಧರಿಸಿಯೇ ಲೋಕಸಭಾ, ವಿಧಾನಸಭೆ ಕ್ಷೇತ್ರಗಳ ಪುನರ್ ವಿಂಗಡಣೆ ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ ನಿರ್ಣಯಕ್ಕೆ ಅಂಗೀಕಾರ ಪಡೆಯಲಾಯಿತು.
ಬಳಿಕ ನಾಲ್ಕನೆಯದಾಗಿ ಪಾರಂಪರಿಕ ಅರಣ್ಯ ವಾಸಿಗಳ ನಿಯಮಗಳನ್ನು ಮಾರ್ಪಾಡು ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ನಿರ್ಣಯ ಮಂಡಿಸಿ, ಸದನದ ಅಂಗೀಕಾರ ಪಡೆದರು.
ನಿರ್ಣಯ ಅಂಗೀಕಾರ ವೇಳೆ ಬಿಜೆಪಿ ನಾಯಕರು ರೊಚ್ಚಿಗೆದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದರ ಬಗ್ಗೆ ಸದನದಲ್ಲಿ ಸಂಪೂರ್ಣ ಚರ್ಚೆ ನಡೆಸಬೇಕು. ಇದನ್ನು ಮುಂದಕ್ಕೆ ಹಾಕಿ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸದನದಲ್ಲೇ ಒತ್ತಾಯಿಸಿದರು.
ಆದರೂ ಆರ್.ಅಶೋಕ್ ಮಾತಿಗೆ ತಲೆಕೆಡಿಸಿಕೊಳ್ಳದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ, ಕೇಂದ್ರದ ವಿರುದ್ಧ ನಾಲ್ಕು ನಿರ್ಣಯಗಳನ್ನು ಮಂಡನೆ ಮಾಡಿ ನಿರ್ಣಯ ಪಡೆಯಿತು.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…