Mysore
18
overcast clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ಇಂದೇ ಜಾತಿ ಗಣತಿ ಕ್ಲೈಮ್ಯಾಕ್ಸ್:‌  ಸಂಜೆ 4ಕ್ಕೆ ಸಚಿವ ಸಂಪುಟ ಸಭೆ

ಬೆಂಗಳೂರು: ಇಂದು ಸಂಜೆ 4 ಗಂಟೆಗೆ ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಜಾತಿ ಗಣತಿ (Caste Census) ವರದಿ ಬಗ್ಗೆ ಸರ್ಕಾರದ ನಿರ್ಣಯದ ಕುರಿತು ತೀವ್ರ ಕುತೂಹಲ ನಿರ್ಮಾಣವಾಗಿದೆ.

ಜಾತಿ ಗಣತಿ ವರದಿ ಕುರಿತು ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿನ ಸಭೆ ತೀವ್ರ ಮಹತ್ವ ಪಡೆದುಕೊಳ್ಳಲಿದೆ.

ಯಾವುದೇ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡುವ ಯಾವ ನಿರ್ಧಾರಗಳನ್ನು ತೆಗೆದುಕೊಳ್ಳದೇ ಸುರಕ್ಷಿತ ರೀತಿಯಲ್ಲಿ ಜಾತಿ ಗಣತಿ ವರದಿ ಜಾರಿ ಮಾಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

ಹಿಂದುಳಿದ ವರ್ಗಗಳ ಮೀಸಲಾತಿ ಪುನರ್‌ರಚಿಸಲು ಸಂಪುಟದಲ್ಲಿ ಚರ್ಚಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಯಾವ ಯಾವ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು ಎಂಬ ಕುತೂಹಲ ಮನೆಮಾಡಿದೆ.

ಇನ್ನು ಜಾತಿಗಣತಿ ವರದಿಗೆ ಲಿಂಗಾಯತರು ಹಾಗೂ ಒಕ್ಕಲಿಗ ಸಮುದಾಯದವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರೆ, ಹಿಂದುಳಿದ ವರ್ಗಗಳು ಈ ವರದಿ ಪರ ಪ್ರಬಲ ಬೆಂಬಲ ವ್ಯಕ್ತಪಡಿಸಿವೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಇಂದು ಸಂಜೆ ಜಾತಿ ಗಣತಿ ವರದಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಏನೆಲ್ಲಾ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂಬ ಕುತೂಹಲ ಮನೆಮಾಡಿದೆ.

ಇದನ್ನೂ ಓದಿ:- ರಾಜ್ಯ ದಿವಾಳಿಯಾಗಿಲ್ಲ, ಆರ್ಥಿಕವಾಗಿ ಸದೃಢ : ಸಿಎಂ ಸಿದ್ದರಾಮಯ್ಯ

Tags:
error: Content is protected !!