ಬೆಂಗಳೂರು: ಇಂದು ಸಂಜೆ 4 ಗಂಟೆಗೆ ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಜಾತಿ ಗಣತಿ (Caste Census) ವರದಿ ಬಗ್ಗೆ ಸರ್ಕಾರದ ನಿರ್ಣಯದ ಕುರಿತು ತೀವ್ರ ಕುತೂಹಲ ನಿರ್ಮಾಣವಾಗಿದೆ.
ಜಾತಿ ಗಣತಿ ವರದಿ ಕುರಿತು ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿನ ಸಭೆ ತೀವ್ರ ಮಹತ್ವ ಪಡೆದುಕೊಳ್ಳಲಿದೆ.
ಯಾವುದೇ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡುವ ಯಾವ ನಿರ್ಧಾರಗಳನ್ನು ತೆಗೆದುಕೊಳ್ಳದೇ ಸುರಕ್ಷಿತ ರೀತಿಯಲ್ಲಿ ಜಾತಿ ಗಣತಿ ವರದಿ ಜಾರಿ ಮಾಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
ಹಿಂದುಳಿದ ವರ್ಗಗಳ ಮೀಸಲಾತಿ ಪುನರ್‌ರಚಿಸಲು ಸಂಪುಟದಲ್ಲಿ ಚರ್ಚಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಯಾವ ಯಾವ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು ಎಂಬ ಕುತೂಹಲ ಮನೆಮಾಡಿದೆ.
ಇನ್ನು ಜಾತಿಗಣತಿ ವರದಿಗೆ ಲಿಂಗಾಯತರು ಹಾಗೂ ಒಕ್ಕಲಿಗ ಸಮುದಾಯದವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರೆ, ಹಿಂದುಳಿದ ವರ್ಗಗಳು ಈ ವರದಿ ಪರ ಪ್ರಬಲ ಬೆಂಬಲ ವ್ಯಕ್ತಪಡಿಸಿವೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಇಂದು ಸಂಜೆ ಜಾತಿ ಗಣತಿ ವರದಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಏನೆಲ್ಲಾ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂಬ ಕುತೂಹಲ ಮನೆಮಾಡಿದೆ.
ಇದನ್ನೂ ಓದಿ:- ರಾಜ್ಯ ದಿವಾಳಿಯಾಗಿಲ್ಲ, ಆರ್ಥಿಕವಾಗಿ ಸದೃಢ : ಸಿಎಂ ಸಿದ್ದರಾಮಯ್ಯ
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…