ಬೆಂಗಳೂರು : IAS , IRS ಸೇರಿ ಮತ್ತಿತರೆ ಸ್ಪರ್ಧಾತ್ಮಕ ಪರೀಕ್ಷೆಗೆ ದೆಹಲಿಯಲ್ಲಿ ಸಿದ್ಧತೆ ನಡೆಸುತ್ತಿರುವ ಪರಿಶಿಷ್ಟ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಉತ್ತಮ ಹಾಸ್ಟೆಲ್ ಕಟ್ಟಿಸುವ ಜೊತೆಗೆ ತಿಂಗಳಿಗೆ ೧೫ ಸಾವಿರ ರೂಪಾಯಿ ಕೊಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಸದ್ಯ ವಿದ್ಯಾರ್ಥಿಗಳಿಗೆ ೧೦ ಸಾವಿರ ರೂಪಾಯಿ ಕೊಡಲಾಗುತ್ತಿದ್ದು, ಇದೀಗ ೫ ಸಾವಿರ ಹೆಚ್ಚಿಸಲಾಗುವುದು. ಈ ಸಂಬಂಧ ತಕ್ಷಣ ಆದೇಶ ಹೊರಡಿಸಲಾಗುವುದು ಎಂದು ಇಂದು ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಹಂಚಿಕೆ ರಾಜ್ಯ ಪರಿಷತ್ ಸಭೆಯಲ್ಲಿ ಘೋಷಿಸಲಾಯಿತು.
ಅಲ್ಲದೆ ಈ ಹಾಸ್ಟೆಲ್ ನಲ್ಲಿ ದಾಖಲಾಗುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಾಗ್ರಿ ಖರೀದಿ, ಇತರೆ ಖರ್ಚು ವೆಚ್ಚಗಳನ್ನು ಭರಿಸಲು ತಿಂಗಳಿಗೆ 16 ಸಾವಿರ ರೂಪಾಯಿ ಆರ್ಥಿಕ ನೆರವು ನೀಡಲಿದೆ. ದೆಹಲಿಯಲ್ಲಿ ನಿರ್ಮಾಣವಾಗುವ ಹಾಸ್ಟೆಲ್‌ನಲ್ಲಿ ಹೈಟೆಕ್ ಲೈಬ್ರರಿ ಸ್ಥಾಪಿಸಲಾಗುತ್ತಿದ್ದು, ಅಲ್ಲಿ ವಿದ್ಯಾರ್ಥಿಗಳ ಪರೀಕ್ಷಾ ತಯಾರಿಕೆಗೆ ಅಗತ್ಯವಿರುವ ಎಲ್ಲಾ ಪುಸ್ತಕಗಳನ್ನ ಓದಗಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ.
ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…
೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…
ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…
ಹೇಮಂತ್‌ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…