ರಾಜ್ಯ

ಉದ್ಯೋಗ ಮೇಳ ನಡೆಸಲಿದೆ ರಾಜ್ಯ ಸರ್ಕಾರ; 6 ಸಚಿವರ ತಂಡ ರಚನೆ

ಐದು ಗ್ಯಾರೆಂಟಿ ಯೋಜನೆಗಳನ್ನು ಘೋಷಿಸಿದ್ದ ಕರ್ನಾಟಕ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಆ ಎಲ್ಲಾ ಯೋಜನೆಗಳನ್ನು ಜಾರಿಗೆ ತರುವಲ್ಲಿ ಯಶಸ್ವಿಯಾಗಿದ್ದು, ತನ್ನ ಪ್ರಣಾಳಿಕೆಯಲ್ಲಿ ಇದ್ದಂತೆ ಇದೀಗ ರಾಜ್ಯಮಟ್ಟದ ಉದ್ಯೋಗ ಮೇಳ ನಡೆಸಲು ಮುಹೂರ್ತ ನಿಗದಿಪಡಿಸಿದೆ. ಮುಂಬರುವ ಲೋಕಸಭೆ ಚುನಾವಣೆಗೆ ಯುವ ಜನರ ಮತ ಸೆಳೆಯಲು ರಾಜ್ಯ ಸರ್ಕಾರ ಈ ಉದ್ಯೋಗ ಮೇಳದ ಮೂಲಕ ಯೋಜನೆ ರೂಪಿಸಿದಂತಿದೆ.

ಹೌದು, ರಾಜ್ಯ ಸರ್ಕಾರ ಜನವರಿ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಉದ್ಯೋಗ ಮೇಳವನ್ನು ನಡೆಸಲು ತೀರ್ಮಾನಿಸಲಾಗಿದ್ದು, ಇದನ್ನು ಪರಿಣಾಮಕಾರಿಯಾಗಿ ನಡೆಸಲು 6 ಸಚಿವರ ತಂಡವನ್ನೂ ಸಹ ರಚಿಸಲಾಗಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದ್ದು, ಕೈಗಾರಿಕಾ ಸಚಿವ ಎಂಬಿ ಪಾಟೀಲ್‌, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ, ಕೌಶಲಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್‌, ಉನ್ನತ ಶಿಕ್ಷಣ ಸಚಿವ ಡಾ ಎಂಸಿ ಸುಧಾಕರ್‌, ಯುವ ಸಬಲೀಕರಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ ನಾಗೇಂದ್ರ, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಹಾಗೂ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರನ್ನೊಳಗೊಂಡ ತಂಡವನ್ನು ರಚಿಸಲಾಗಿದ್ದು, ಉದ್ಯೋಗದಾತರೊಂದಿಗೆ ಸಂಪರ್ಕ ಬೆಳೆಸಿ, ಈ ಕುರಿತು ಚರ್ಚಿಸಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

andolana

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

2 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

8 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

8 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

9 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

10 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

16 hours ago