ಕೇಂದ್ರ ಸರ್ಕಾರದ ತಾರತಮ್ಯದ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಇದೇ ಫೆಬ್ರವರಿ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನವದೆಹಲಿಯಲ್ಲಿ ಪ್ರತಿಭಟನೆ ನಡೆಯಲಿದೆ.
ಈ ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಚರ್ಚಿಸಿದ್ದು, ಸಿದ್ದರಾಮಯ್ಯ ಸಹ ಒಪ್ಪಿಗೆ ಸೂಚಿಸಿದ್ದಾರೆ.
ಕೇಂದ್ರ ಬಜೆಟ್ ನಲ್ಲಿ ಕರ್ನಾಟಕ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಕೇಂದ್ರದ ಮಲತಾಯಿ ಧೋರಣೆಯಿಂದ ಕಳೆದ ಐದು ವರ್ಷಗಳಲ್ಲಿ ರಾಜ್ಯಕ್ಕೆ 62 ಸಾವಿರ ಕೋಟಿ ಹಣ ನಷ್ಟವಾಗಿದೆ. ಹೀಗಾಗಿ ಫೆಬ್ರವರಿ 7 ರಂದು ಕರ್ನಾಟಕ ಸರ್ಕಾರವು ಪ್ರತಿಭಟನೆ ನಡೆಸಲಿದೆ. ಈ ಪ್ರತಿಭಟನೆಯಲ್ಲಿ ಸಚಿವರು, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ ಎಂಬ ಮಾಹಿತಿ ನೀಡಿದ ಡಿಕೆ ಶಿವಕುಮಾರ್ ಪ್ರತಿಭಟನೆ ನಡೆಸಲು ಸ್ಥಳಾವಕಾಶಕ್ಕಾಗಿ ಕೇಂದ್ರಕ್ಕೆ ಪತ್ರ ಬರೆಯಲಾಗಿದ್ದು, ಅನುಮತಿ ಸಿಕ್ಕ ಸ್ಥಳದಲ್ಲಿ ಪ್ರತಿಭಟನೆ ನಡೆಸಲಿದ್ದೇವೆ ಎಂದು ತಿಳಿಸಿದರು.



