ರಾಜ್ಯ

ದೇಶದ ಜಿಡಿಪಿಯಲ್ಲಿ ಬೆಳವಣಿಗೆ; ಕರ್ನಾಟಕದ ಕೊಡುಗೆ ಅತಿಹೆಚ್ಚು: ಸಿದ್ದರಾಮಯ್ಯ

ಹಾಸನ: ನಗರದಲ್ಲಿ ಇಂದು ( ಮಾರ್ಚ್‌ 1 ) ನಗರದಲ್ಲಿ ವಿವಿಧ ಇಲಾಖೆಗಳ ಅಡಿಯಲ್ಲಿ ಅನುಷ್ಠಾನಗೊಂಡಿರುವ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಹೊಸ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಿದ್ದರಾಮಯ್ಯ ಬಳಿಕ ಮಾಧ್ಯಮದವರ ಜತೆ ಮಾತನಾಡಿ ದೇಶದಲ್ಲಿ ಶೇ.18ರಷ್ಟು ಜಿಡಿಪಿ ಬೆಳವಣಿಗೆಯಾಗಿದ್ದು, ಅತಿಹೆಚ್ಚು ಕೊಡುಗೆ ನೀಡಿದ ಪ್ರಥಮ ರಾಜ್ಯ ಕರ್ನಾಟಕವಾಗಿದೆ ಎಂದು ಹೇಳಿಕೆ ನೀಡಿದರು.

ಈ ಬೆಳವಣಿಗೆಗೆ ಗ್ಯಾರಂಟಿ ಯೋಜನೆಗಳ ಫಲ ಎಂಬುದನ್ನು ಅಂಕಿಅಂಶಗಳು ಹೇಳುತ್ತಿವೆ ಎಂದು ಸಹ ಸಿದ್ದರಾಮಯ್ಯ ಹೇಳಿದರು. ಗ್ಯಾರಂಟಿ ಯೋಜನೆಗಳಿಂದ ಖಾತೆಗೆ ಬಂದ ಹಣದಿಂದಾಗಿ ಜನರಲ್ಲಿ ಕೊಳ್ಳುವ ಶಕ್ತಿ, ಉಳಿತಾಯದ ಶಕ್ತಿ ಹೆಚ್ಚಾಗಿದೆ. ಇದರ ಪರಿಣಾಮವಾಗಿ ರಾಜ್ಯದಲ್ಲಿ ಆರ್ಥಿಕ ಚಟುವಟಿಕೆ ತೀವ್ರಗೊಂಡು ಆರ್ಥಿಕ ಪ್ರಗತಿ ಕಂಡಿದೆ ಎಂದು ಸಿದ್ದರಾಮಯ್ಯ ತಮ್ಮ ಸರ್ಕಾರದ ಯೋಜನೆಗಳನ್ನು ಸಮರ್ಥಿಸಿಕೊಂಡರು.

ಅಲ್ಲದೇ ಮುಂಬರುವ ಲೋಕಸಭೆ ಚುನಾವಣೆ ಕುರಿತೂ ಸಹ ಮಾತನಾಡಿದ ಸಿದ್ದರಾಮಯ್ಯ ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆಯನ್ನು ತಕ್ಷಣದಲ್ಲಿ ಮಾಡಲಾಗುವುದು. ಎಲ್ಲರೂ ಒಗ್ಗಟ್ಟಾಗಿರುವುದರಿಂದ ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಗೊಂದಲವಿರುವುದಿಲ್ಲ ಎಂದು ತಿಳಿಸಿದರು.

andolana

Recent Posts

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

1 hour ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

1 hour ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

1 hour ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

1 hour ago

ಆಂತರಿಕ ಕ್ಲೋಭೆಯಿಂದ ಭಾರತ ರಕ್ಷಿಸಿದ ಅಂಬೇಡ್ಕರ್

ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…

1 hour ago

ಕೊಡಗು ಜಿಲ್ಲೆಯಲ್ಲೂ ಹೆಚ್ಚುತ್ತಿರುವ ತಾಪಮಾನ

ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ  ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…

1 hour ago