ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ 800ರ ಗಡಿ ದಾಟಿದೆ. ರಾಜ್ಯದಲ್ಲಿ ಇದುವರೆಗೂ 837 ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಒಟ್ಟು 444 ಸಕ್ರಿಯ ಕೊವಿಡ್ ಪ್ರಕರಣಗಳಿರುವುದು ವಿಶೇಷವಾಗಿದೆ.
ನಿನ್ನೆ ಒಂದೇ ದಿನ 41 ಜನರಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಇಲ್ಲಿಯವರೆಗೂ 386 ಜನ ಡಿಸ್ಟಾರ್ಜ್ ಆಗಿದ್ದರೆ, 444 ಜನ ಹೋಮ್ ಐಸೋಲೇಷನ್‍ನಲ್ಲಿದ್ದಾರೆ. ಸದ್ಯ ಕೊವಿಡ್ ಪಾಸಿಟಿವ್ ರೇಟ್ ಶೇ.7.1ರಷ್ಟಿದೆ.
ಈ ಲಕ್ಷಣಗಳನ್ನು ನೋಡುತ್ತಿದ್ದರೆ ರಾಜ್ಯದಲ್ಲಿ ಮತ್ತೆ ಕೊರೊನಾ ಮಹಾಮಾರಿ ಒಕ್ಕರಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಇದನ್ನೂ ಓದಿ:- ದೆಹಲಿ ಸಿಎಂ ರೇಖಾ ಗುಪ್ತಾಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿ ಅರೆಸ್ಟ್
ಆದರೂ ತಜ್ಞ ವೈದ್ಯರು ಈ ಬಾರಿಯ ಕೊರೊನಾ ಸೋಂಕು ಮಾರಣಾಂತಿಕವಾಗಿಲ್ಲ ಎಂದು ಹೇಳಿದ್ದು, ಜನತೆ ಕೊರೊನಾ ಮಹಾಮಾರಿಯಿಂದ ತಪ್ಪಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು ಅವಶ್ಯಕವಾಗಿದೆ ಎಂದು ಸೂಚನೆ ನೀಡಿದ್ದಾರೆ.





