Mysore
24
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಸಂಧಾನ ಯಶಸ್ವಿ : ಮುಷ್ಕರ ಹಿಂಪಡೆದ ವೈದ್ಯರು

 ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ  (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಮಂಗಳವಾರ ಸಂಜೆ ಹಿಂಪಡೆದಿದೆ.

ಮಾರ್ಚ್ 11 ರಿಂದ 15 ರವರೆಗೆ ಮೊದಲ ಹಂತದ ಮುಷ್ಕರದಲ್ಲಿ ತುರ್ತು ಸೇವೆ ಹೊರತುಪಡಿಸಿ, ಹೊರರೋಗಿಗಳ ಸೇವೆಯನ್ನು ಸ್ಥಗಿತಗೊಳಿಸಲಾಗುವುದು ಮತ್ತು ಮಾರ್ಚ್ 16 ರಿಂದ ವೈದ್ಯರು, ಅಧಿಕಾರಿಗಳು ಮತ್ತು ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ಕರ್ತವ್ಯದಿಂದ ದೂರವಿರುತ್ತಾರೆ ಎಂದು ಸಂಘ ಎಚ್ಚರಿಕೆ ನೀಡಿತ್ತು.

ಮುಷ್ಕರದ ಹಿನ್ನೆಲೆಯಲ್ಲಿ ಸಂಘದ ಸದಸ್ಯರೊಂದಿಗೆ ರಾಜ್ಯ ಸರ್ಕಾರ ಮಾತುಕತೆ ನಡೆಸಿದ್ದು, ಅಲ್ಲಿ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.

14 ಬೇಡಿಕೆಗಳ ಪೈಕಿ 13 ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಇಲಾಖೆಯಲ್ಲಿ ಹೆಚ್ಚುವರಿ ಕಾರ್ಯದರ್ಶಿ ಹುದ್ದೆಯನ್ನು ಸೃಷ್ಟಿಸಲು ಸರ್ಕಾರ ಒಪ್ಪಿಗೆ ನೀಡಿದ್ದು, ಅವರು ತಾಂತ್ರಿಕ ವ್ಯಕ್ತಿಯಾಗಿರುತ್ತಾರೆ. ಇದು ಬಹುಕಾಲದ ಬೇಡಿಕೆಗಳಲ್ಲಿ ಒಂದಾಗಿತ್ತು. ನಮ್ಮ ಬೇಡಿಕೆಯನ್ನು ಕಾಲಮಿತಿಯಲ್ಲಿ ಪೂರೈಸಲು ಸರ್ಕಾರ ಒಪ್ಪಿಕೊಂಡಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಡಾ.ರವೀಂದ್ರ ಮೇಟಿ ತಿಳಿಸಿದ್ದಾರೆ.

ಕಾಲಮಿತಿಯೊಳಗೆ ಬೇಡಿಕೆ ಪೂರ್ಣಗೊಳಿಸುವುದಾಗಿ ಸರ್ಕಾರ ಹೇಳಿದ್ದು, ಹೀಗಾಗಿ ಸದ್ಯಕ್ಕೆ ಪ್ರತಿಭಟನೆಯನ್ನು ಮುಂದೂಡುತ್ತಿದ್ದೇವೆ, ನಿಗದಿತ ಸಮಯದಲ್ಲಿ ಪೂರ್ಣಗೊಳಿಸದಿದ್ದರೆ ನಂತರ ತೀರ್ಮಾನಿಸುತ್ತೇವೆ ಎಂದು ವೈದ್ಯಾಧಿಕಾರಿ ಹೇಳಿದ್ದಾರೆ.

Tags:
error: Content is protected !!