ಬೆಂಗಳೂರು: ತೀವ್ರ ಬೇಸಿಗೆಯಿಂದಾಗಿ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಶೇ.31ರಷ್ಟು ಮಾತ್ರ ಜಲಾಶಯಗಳಲ್ಲಿ ನೀರು ಸಂಗ್ರಹವಾಗಿದೆ.
ಪ್ರಸ್ತುತ ರಾಜ್ಯದ ಪ್ರಮುಖ 14 ಜಲಾಶಯಗಳಲ್ಲಿ 277 ಟಿಎಂಸಿ ಅಡಿಗೂ ಹೆಚ್ಚು ನೀರು ಸಂಗ್ರಹವಾಗಿದೆ. ಆದರೆ, ಕಳೆದ ವರ್ಷ ಇದೇ ಅವಧಿಯಲ್ಲಿ ಕೇವಲ 193 ಟಿಎಂಸಿ ಅಡಿಯಷ್ಟು ಮಾತ್ರ ನೀರಿನ ಸಂಗ್ರಹವಿತ್ತು.
ಹೀಗಾಗಿ ರಾಜ್ಯದ ಪ್ರಮುಖ 14 ಜಲಾಶಯಗಳಲ್ಲಿರುವ ನೀರು ಮುಂಗಾರು ಮಳೆ ಆರಂಭದವರೆಗೂ ಸಾಕಾಗಲಿದೆ. ಕುಡಿಯುವ ನೀರು, ಕೃಷಿ ಹಾಗೂ ಜಲ ವಿದ್ಯುತ್ ಉತ್ಪಾದನೆಗೆ ಸದ್ಯಕ್ಕೆ ತೊಂದರೆ ಇಲ್ಲ. ಬೇಸಿಗೆ ಇನ್ನೂ 20 ದಿನಗಳು ಇರಲಿದೆ. ನೈರುತ್ಯ ಮುಂಗಾರು ಮಳೆ ಆರಂಭಕ್ಕೆ ಇನ್ನೂ ಮೂರು ವಾರಗಳು ಬಾಕಿ ಇವೆ.
ಪೂರ್ವ ಮುಂಗಾರು ಮಳೆಯಿಂದಾಗಿ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಿದೆ. ಆದರೆ, ಜಲಾಶಯಗಳು ಹಾಗೂ ಕೆರೆ, ಕಟ್ಟೆಗಳಿಗೆ ಹೆಚ್ಚಿನ ಪ್ರಮಾಣದ ನೀರು ಬಂದಿಲ್ಲ.
ಕಳೆದ ಬಾರಿ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚಾಗಿದ್ದ ಪರಿಣಾಮ ರಾಜ್ಯದ ಬಹುತೇಕ ಎಲ್ಲಾ ಪ್ರಮುಖ ಜಲಾಶಯಗಳು ಭರ್ತಿಯಾಗಿದ್ದವು. ಈ ಬಾರಿಯೂ ಉತ್ತಮ ಮಳೆಯಾಗುವ ಮುನ್ಸೂಚನೆಗಳಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…