2024ನೇ ಸಾಲಿನ ವಿವಿಧ ವೃತ್ತಿಪರ ಕೋರ್ಸ್‌ಗಳ ಸಿಇಟಿ ಪರೀಕ್ಷೆಯ ದಿನಾಂಕಗಳನ್ನು ಈ ಹಿಂದೆಯೇ ನಿಗದಿಪಡಿಸಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೀಗ ಆ ದಿನಾಂಕಗಳಲ್ಲಿ ಬದಲಾವಣೆಯನ್ನು ತಂದಿದೆ.
ಏಪ್ರಿಲ್ 20 ಹಾಗೂ 21ರಂದು ನಿಗದಿಯಾಗಿದ್ದ ಸಿಇಟಿ ಪರೀಕ್ಷೆಯನ್ನು ಏಪ್ರಿಲ್ 18 ಹಾಗೂ ಏಪ್ರಿಲ್ 19ರಂದು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಈ ವಿಷಯವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಮಾಧ್ಯಮ ಪ್ರಕಟಣೆ ಹೊರಡಿಸುವ ಮೂಲಕ ತಿಳಿಸಿದ್ದಾರೆ. ಜನವರಿ 10ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾಧಿಕಾರ ಅವಕಾಶ ನೀಡಿದೆ.





