ರಾಜ್ಯ

ಕರ್ನಾಟಕ ಸುವರ್ಣ ಸಂಭ್ರಮ-50: ಸಮಾರೋಪವನ್ನು ಕನ್ನಡ ಜನೋತ್ಸವವಾಗಿ ಆಚರಿಸಲು ಸಿಎಂ ನಿರ್ಧಾರ

ಬೆಂಗಳೂರು: ಕರ್ನಾಟಕ ಸುವರ್ಣ ಸಂಭ್ರಮ-50ರ ಸಮಾರೋಪವನ್ನು ಕನ್ನಡ ಜನೋತ್ಸವವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಕನ್ನಡ ಚರಿತ್ರೆಯನ್ನು ಇವತ್ತಿನ ಕನ್ನಡ ಯುವ ಸಮೂಹಕ್ಕೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಗುರುವಾರ ನಗರದ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ರಾಜ್ಯೋತ್ಸವ ಪ್ರಶಸ್ತಿ – 2024 ಪ್ರದಾನ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರೋಪ ಸಮಾರಂಭ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕನ್ನಡ ಭಾಷೆ-ಸಂಸ್ಕೃತಿ-ಸಂಗೀತ-ಸಾಹಿತ್ಯ-ಜನಪದ-ಚರಿತ್ರೆ ಎಲ್ಲದರ ಮಹತ್ವ ಸಾರಲು ಸಿದ್ಧತೆ ನಡೆಸಲಾಗಿದೆ ಎಂದರು.

ಸಭೆಯ ಇತರೆ ಮುಖ್ಯಾoಶಗಳು ಹೀಗಿವೆ….

ರಾಜ್ಯೋತ್ಸವ ಪ್ರಶಸ್ತಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಸೆಪ್ಟಂಬರ್‌ 30ರ ವರೆಗೆ ಅರ್ಜಿ ಸಲ್ಲಿಸಬಹುದು. 69 ಮಂದಿಗೆ ಈ ಬಾರಿ ಪ್ರಶಸ್ತಿ ನೀಡಲಾಗುವುದು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಆಯ್ಕೆಗೆ ಸಮಿತಿ ರಚಿಸಲಾಗಿದೆ.

ಎಲ್ಲಾ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ನಡೆಯುತ್ತಿದ್ದು, ಹಂಪಿಯಿಂದ ಆರಂಭವಾದ ಕನ್ನಡ ರಥ ಯಾತ್ರೆ ಈಗಾಗಲೇ 28 ಜಿಲ್ಲೆಗಳಲ್ಲಿ ಸಾಗಿದ್ದು, ರಥಯಾತ್ರೆಯ ಸಮಾರೋಪ ಸಮಾರಂಭ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆಯಲಿದೆ.

ಕರ್ನಾಟಕ ಸುವರ್ಣ ಸoಭ್ರಮ -50 ಸಮಾರೋಪ ಸಮಾರoಭ ವಿಧಾನಸೌಧದ ಮುಂಭಾಗದಲ್ಲಿ ನಡೆಯಲಿದೆ. ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಹ ಇದೇ ಸಂದರ್ಭದಲ್ಲಿ ಮಾಡಲಾಗುವುದು.

ಮೈಸೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಕಚೇರಿ ಅವರಣದಲ್ಲಿ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಪ್ರತಿಮೆ ಸ್ಥಾಪನೆಗೆ ಕಾಮಗಾರಿ ಪ್ರಗತಿಯಲ್ಲಿದೆ.

ಬಳ್ಳಾರಿಯಲ್ಲಿ ರಂಜಾನ್‌ ಸಾಬ್‌ ಸ್ಮಾರಕ ನಿರ್ಮಾಣ ಕಾರ್ಯ ನಡೆಯುತ್ತಿದೆ.

ಧಾರವಾಡದಲ್ಲಿ ಅದರಗುಂಚಿ ಶಂಕರಗೌಡ ಸ್ಮಾರಕ ನಿರ್ಮಿಸಲು ಅಂದಾಜು ವೆಚ್ಚ ಸಲ್ಲಿಸಲಾಗಿದೆ.

ಗದಗದಲ್ಲಿ ಅಂದಾನಪ್ಪ ದೊಡ್ಡ ಮೇಟಿ ಸ್ಮಾರಕ ನಿರ್ಮಿಸಲಾಗುತ್ತಿದೆ.

50 ಸಾಧಕ ಮಹಿಳೆಯರ ಕುರಿತು 100 ಪುಟಗಳ 50ಕೃತಿಗಳನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ ಮೂಲಕ ಮುದ್ರಿಸಲಾಗುವುದು.

ವಿಧಾನಸೌಧ ಆವರಣದಲ್ಲಿ 25ಅಡಿ ಎತ್ತರದ ಭುವನೇಶ್ವರಿದೇವಿ ಕಂಚಿನ ಪ್ರತಿಮೆ ಕಾಮಗಾರಿ ಪ್ರಗತಿಯಲ್ಲಿದ್ದು, ನವೆಂಬರ್‌ 1ರಂದು ಅನಾವರಣ ಮಾಡಬೇಕು.

ರಾಜ್ಯದ ನಾಲ್ಕು ವಲಯಗಳಲ್ಲಿ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು. ಮೈಸೂರಿನಲ್ಲಿ ಚಿಂತನಾ ಸಮಾವೇಶ, ರಾಯಚೂರಿಗೆ ಗೋಕಾಕ್‌ ಚಳವಳಿ ಸಂಸ್ಮರಣೆ, ಮಹಾರಾಷ್ಟ್ರದ ಜತ್‌ ತಾಲೂಕಿನಲ್ಲಿ ಗಡಿನಾಡು ಸಾಂಸ್ಕೃತಿಕ ಉತ್ಸವ ಮತ್ತು ಮಂಗಳೂರಿನಲ್ಲಿ ವಿವಿಧ ಅಕಾಡೆಮಿ ಸಹಯೋಗದಲ್ಲಿ ಬಹುಸಂಸ್ಕೃತಿ ಉತ್ಸವ ಆಯೋಜನೆ.

ಕರ್ನಾಟಕ ಸುವರ್ಣ ಸಂಭ್ರಮ- 50ನೇ ವರ್ಷಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ.

ಮನೆ ಮನೆಯಲ್ಲಿ ಕನ್ನಡ ಬಾವುಟವನ್ನು ಹಾರಿಸಲು ಮನವಿ ಮಾಡಲಾಗುವುದು.

ಕರ್ನಾಟಕದ ಬಹು ಸಂಸ್ಕೃತಿ, ಸೌಹಾರ್ದ ಸಂಸ್ಕೃತಿ, ಬಹುತ್ವದ ಕುರಿತು 100 ಪುಸ್ತಕಗಳನ್ನು ಸಿದ್ಧಪಡಿಸಲಾಗುತ್ತಿದ್ದು, ಡಿಸೆಂಬರ್‌ ವೇಳೆಗೆ ಬಿಡುಗಡೆ ಮಾಡಲಾಗುವುದು.

ನಾಡಿನ ಕಲೆ, ಸಾಹಿತ್ಯ, ಕೃಷಿ, ತೋಟಗಾರಿಕೆ, ಕೈಗಾರಿಕೆ ಕುರಿತಾದ 5 ಸಂಪುಟಗಳನ್ನು ಸಿದ್ಧಪಡಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ಸ್ಮರಣ ಸಂಭ್ರಮ ಸಂಪುಟ ಹೊರತರಲಾಗುತ್ತಿದೆ.

ಕನ್ನಡದ ಸಾಹಿತಿಗಳ ನುಡಿಮುತ್ತುಗಳನ್ನು ಎಲ್ಲಾ ಜಿಲ್ಲೆಗಳ ಪ್ರಮುಖ ಸ್ಥಳಗಳಲ್ಲಿ, ಕೆಎಸ್‌ಆರ್‌ಟಿಸಿ ಬಸ್‌ ಮತ್ತಿತರ ಕಡೆಗಳಲ್ಲಿ ಪ್ರಚುರಪಡಿಸಬೇಕು.

ಎಲ್ಲಾ ಶಾಲಾ ಕಾಲೇಜುಗಳಲ್ಲಿ ಈ ಬಾರಿ ಕನ್ನಡ ರಾಜ್ಯೋತ್ಸವ ಸಂಭ್ರಮವನ್ನು ಅದ್ದೂರಿಯಾಗಿ ಆಚರಿಸಲು ಕ್ರಮಕೈಗೊಳ್ಳಬೇಕು.

ಕೊರಗ ಭಾಷೆಯಂತಹ ಸಣ್ಣ ಭಾಷೆಗಳ ಅಭಿವೃದ್ದಿಗೆ ಕ್ರಮ ಕೈಗೊಳ್ಳಲು ತಜ್ಞರ ಸಮಿತಿ ರಚಿಸುವಂತೆ ಸಭೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಮನವಿ ಮಾಡಿದರು.

ಕನ್ನಡ ಮತ್ತು ಸoಸ್ಕೃತಿ ಇಲಾಖೆ ಸಚಿವ ಶಿವರಾಜ ತoಗಡಗಿ, ಗೃಹ ಸಚಿವ ಜಿ.ಪರಮೇಶ್ವರ್‌, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್‌, ಎಸ್.ಆರ್.ಉಮಾಶಂಕರ್‌, ಇಲಾಖಾ ಕಾರ್ಯದರ್ಶಿ ಅಜಯ ನಾಗಭೂಷಣ್, ವಿವಿಧ ಪ್ರಾಧಿಕಾರ ಹಾಗೂ ಅಕಾಡೆಮಿಗಳ ಅಧ್ಯಕ್ಷರು ಮತ್ತಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

7 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

7 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

14 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

14 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

14 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

14 hours ago