ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ನಿಯಮದಲ್ಲಿ ಬದಲಾವಣೆ ತರಲಾಗಿದೆ. ಈ ಸಂಬಂಧ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಗೃಹಜ್ಯೋತಿ ಸರಾಸರಿ ಪ್ರಮಾಣದಲ್ಲಿ ಹೆಚ್ಚುವರಿಯಾಗಿ ಶೇ. 10ರಷ್ಟು ವಿದ್ಯುತ್ ನೀಡಲಾಗುತ್ತಿದ್ದ ಮಾನದಂಡವನ್ನು 10 ಯೂನಿಟ್ ಆಗಿ ಬದಲಾಯಿಸಲು ತೀರ್ಮಾನಿಸಲಾಗಿದೆ.
ಸಚಿವ ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಕೆಜೆ ಜಾರ್ಜ್ ಗೃಹಜ್ಯೋತಿ ಯೋಜನೆಯಡಿಯಲ್ಲಿ 200 ಯೂನಿಟ್ ವಿದ್ಯುತ್ ಉಚಿತ ಎಂದು ಹೇಳಿದ್ದೆವು. ಇದರನ್ವಯ ವಾರ್ಷಿಕ ಸರಾಸರಿ ಮೇಲೆ ಶೇ.10ರಷ್ಟು ಹೆಚ್ಚುವರಿ ವಿದ್ಯುತ್ ಬಳಕೆ ಮಾಡಲು ಗ್ರಾಹಕರಿಗೆ ಅವಕಾಶ ನೀಡಲಾಗಿತ್ತು. ಕೇವಲ 20,30 ಹಾಗೂ 40 ಯೂನಿಟ್ ವಿದ್ಯುತ್ ಬಳಕೆ ಮಾಡುವ ಗ್ರಾಹಕರಿಗೆ 10% ಹೆಚ್ಚುವರಿ ವಿದ್ಯುತ್ ನೀಡಲಾಗುತ್ತಿತ್ತು. ಅಂದರೆ ಅಂತಹ ಗ್ರಾಹಕರಿಗೆ ಕಡಿಮೆ ವಿದ್ಯುತ್ ಸಿಗುತ್ತಿತ್ತು. ಹೀಗಾಗಿ 48 ಯೂನಿಟ್‌ಗಿಂತ ಕಡಿಮೆ ವಿದ್ಯುತ್ ಬಳಸುವ ಗ್ರಾಹಕರಿಗೆ 10% ಹೆಚ್ಚುವರಿ ವಿದ್ಯುತ್ ನೀಡುವ ಬದಲಾಗಿ ಹೆಚ್ಚುವರಿಯಾಗಿ 10 ಯೂನಿಟ್ ವಿದ್ಯುತ್ ನೀಡಲು ಸಚಿವ ಸಂಪುಟ ಸಮ್ಮತಿಸಿದೆ ಎಂದು ತಿಳಿಸಿದರು.