ಸಚಿವಾಲಯ ಹಾಗೂ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ನಿವೃತ್ತ ಅಧಿಕಾರಿಗಳು ಹಾಗೂ ನೌಕರರಿಗೆ ರಾಜ್ಯ ಸರ್ಕಾರ ಹಿನ್ನಡೆಯುಂಟಾಗುವಂತಹ ಕ್ರಮ ಕೈಗೊಂಡಿದೆ.
ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ನಿವೃತ್ತ ನೌಕರರು ಹಾಗೂ ಅಧಿಕಾರಿಗಳನ್ನು ಈ ಕೂಡಲೇ ಸೇವೆಯಿಂದ ಬಿಡುಗಡೆಗೊಳಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಆದೇಶಿಸಿದ್ದಾರೆ. ಅಲ್ಲದೇ ಆ ಹುದ್ದೆಗಳಿಗೆ ಪ್ರಸ್ತುತ ಸೇವೆಯಲ್ಲಿರುವ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳನ್ನೇ ನಿಯೋಜಿಸಲು ಸಹ ಸೂಚಿಸಿದ್ದಾರೆ.
ಇನ್ನು ಈ ರೀತಿಯ ಕ್ರಮಕ್ಕೆ ಸೂಚಿಸಿದ್ದ ಸಿದ್ದರಾಮಯ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸೇರಿದಂತೆ ರಾಜ್ಯ ಸರ್ಕಾರದ ಇತರೆ ಇಲಾಖೆ ಮತ್ತು ಸಚಿವಾಲಯಗಳಲ್ಲಿ ಅನಗತ್ಯ ಹುದ್ದೆಗಳನ್ನು ಸೃಷ್ಟಿಸಿ ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿರುವ ನೌಕರರನ್ನು ಸಮಾಲೋಚಕರು, ವಿಶೇಷ ಸಂಪನ್ಮೂಲ ವ್ಯಕ್ತಿಗಳನ್ನಾಗಿ ನೇಮಿಸಲಾಗಿದೆ. ಅಲ್ಲದೇ ಗ್ರೂಪ್ ಹಂತದ ಕೆಲ ಹುದ್ದೆಗಳಿಗೂ ಸಹ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ. ಹೀಗೆ ನೇಮಕ ಮಾಡಿಕೊಂಡ ನಿವೃತ್ತ ನೌಕರರಿಗೆ ವೇತನ, ವಾಹನ ಸೇರಿದಂತೆ ಇನ್ನು ಕೆಲ ಸೌಲಭ್ಯಗಳನ್ನು ನೀಡಲಾಗ್ತಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಹೆಚ್ಚುವರಿ ಆರ್ಥಿಕ ಹೊರೆ ಆಗುತ್ತಿದೆ ಎಂದು ಕಾರ್ಯದರ್ಶಿಗೆ ಬರೆದ ಟಿಪ್ಪಣಿಯಲ್ಲಿ ಸಿದ್ದರಾಮಯ್ಯ ಉಲ್ಲೇಖಿಸಿದ್ದರು.
ಧನರ್ಮಾಸಕ್ಕೆ ಮೊದಲೇ ಚಳಿ ದಾಂಗುಡಿ ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್ ದಾಖಲು ಕೆ.ಬಿ.ರಮೇಶನಾಯಕ ಮೈಸೂರು : ಜಿಲ್ಲೆಯಲ್ಲಿ ಕಳೆದ…
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…