ರಾಜ್ಯ

ಗುತ್ತಿಗೆ, ಹೊರಗುತ್ತಿಗೆ ನಿವೃತ್ತ ನೌಕರರಿಗೆ ಶಾಕ್‌ ಕೊಟ್ಟ ರಾಜ್ಯ ಸರ್ಕಾರ

ಸಚಿವಾಲಯ ಹಾಗೂ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ನಿವೃತ್ತ ಅಧಿಕಾರಿಗಳು ಹಾಗೂ ನೌಕರರಿಗೆ ರಾಜ್ಯ ಸರ್ಕಾರ ಹಿನ್ನಡೆಯುಂಟಾಗುವಂತಹ ಕ್ರಮ ಕೈಗೊಂಡಿದೆ.

ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ನಿವೃತ್ತ ನೌಕರರು ಹಾಗೂ ಅಧಿಕಾರಿಗಳನ್ನು ಈ ಕೂಡಲೇ ಸೇವೆಯಿಂದ ಬಿಡುಗಡೆಗೊಳಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ ಆದೇಶಿಸಿದ್ದಾರೆ. ಅಲ್ಲದೇ ಆ ಹುದ್ದೆಗಳಿಗೆ ಪ್ರಸ್ತುತ ಸೇವೆಯಲ್ಲಿರುವ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳನ್ನೇ ನಿಯೋಜಿಸಲು ಸಹ ಸೂಚಿಸಿದ್ದಾರೆ.

ಇನ್ನು ಈ ರೀತಿಯ ಕ್ರಮಕ್ಕೆ ಸೂಚಿಸಿದ್ದ ಸಿದ್ದರಾಮಯ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆ ಸೇರಿದಂತೆ ರಾಜ್ಯ ಸರ್ಕಾರದ ಇತರೆ ಇಲಾಖೆ ಮತ್ತು ಸಚಿವಾಲಯಗಳಲ್ಲಿ ಅನಗತ್ಯ ಹುದ್ದೆಗಳನ್ನು ಸೃಷ್ಟಿಸಿ ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿರುವ ನೌಕರರನ್ನು ಸಮಾಲೋಚಕರು, ವಿಶೇಷ ಸಂಪನ್ಮೂಲ ವ್ಯಕ್ತಿಗಳನ್ನಾಗಿ ನೇಮಿಸಲಾಗಿದೆ. ಅಲ್ಲದೇ ಗ್ರೂಪ್‌ ಹಂತದ ಕೆಲ ಹುದ್ದೆಗಳಿಗೂ ಸಹ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ. ಹೀಗೆ ನೇಮಕ ಮಾಡಿಕೊಂಡ ನಿವೃತ್ತ ನೌಕರರಿಗೆ ವೇತನ, ವಾಹನ ಸೇರಿದಂತೆ ಇನ್ನು ಕೆಲ ಸೌಲಭ್ಯಗಳನ್ನು ನೀಡಲಾಗ್ತಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಹೆಚ್ಚುವರಿ ಆರ್ಥಿಕ ಹೊರೆ ಆಗುತ್ತಿದೆ ಎಂದು ಕಾರ್ಯದರ್ಶಿಗೆ ಬರೆದ ಟಿಪ್ಪಣಿಯಲ್ಲಿ ಸಿದ್ದರಾಮಯ್ಯ ಉಲ್ಲೇಖಿಸಿದ್ದರು.

andolana

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

53 mins ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

55 mins ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

57 mins ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

60 mins ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

1 hour ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

1 hour ago