ರಾಜ್ಯ

ಬಸವಣ್ಣ ʼಕರ್ನಾಟಕದ ಸಾಂಸ್ಕೃತಿಕ ನಾಯಕʼ; ಸಚಿವ ಸಂಪುಟದಲ್ಲಿ ತೀರ್ಮಾನ

ಇಂದು ( ಜನವರಿ 18 ) ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯವನ್ನು ಕೈಗೊಳ್ಳಲಾಗಿದ್ದು, ವಿಶ್ವಗುರು ಬಸವಣ್ಣನವರನ್ನು ʼಕರ್ನಾಟಕದ ಸಾಂಸ್ಕೃತಿಕ ನಾಯಕʼ ಎಂದು ಘೋಷಿಸಬೇಕು ಎಂಬ ನಿರ್ಧಾರವನ್ನೂ ಸಹ ಮಾಡಲಾಗಿದೆ.

ಸಚಿವ ಸಂಪುಟ ಸಭೆ ಮುಗಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಈಶ್ವರ್‌ ಖಂಡ್ರೆ ಈ ಬಗ್ಗೆ ಮಾತನಾಡಿದ್ದು, ಅಧಿಕೃತ ಘೋಷಣೆ ಹೊರಡಿಸುವುದೊಂದೇ ಬಾಕಿ ಉಳಿದಿದೆ.

ಸಚಿವ ಸಂಪುಟ ಸಭೆ ಮುಗಿದ ಬಳಿಕ ಮಾಧ್ಯಮದವರ ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ “ಸಾಮಾಜಿಕ ನ್ಯಾಯದ ಮೊದಲ ಹರಿಕಾರ ಬಸವಣ್ಣನವರನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕʼ ಎಂದು ಘೋಷಿಸಲು ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆ ತೀರ್ಮಾನಿಸಿದೆ. ಸರ್ಕಾರದ ಈ ತೀರ್ಮಾನ ಸಿಎಂ ಆದ ನನಗೆ ಅತೀವ ಹೆಮ್ಮೆ, ತೃಪ್ತಿಯನ್ನು ತಂದಿದೆ” ಎಂದು ತಿಳಿಸಿದರು.

ಇನ್ನು ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದ ವೀರಶೈವ ಲಿಂಗಾಯತ ಸ್ವಾಮೀಜಿಗಳ ನಿಯೋಗ ಬಸವಣ್ಣನವರನ್ನು ʼಕರ್ನಾಟಕದ ಸಾಂಸ್ಕೃತಿಕ ನಾಯಕʼ ಎಂದು ಸರ್ಕಾರದ ಪರವಾಗಿ ಘೋಷಿಸುವಂತೆ ಮನವಿ ಮಾಡಿತ್ತು.

andolana

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

16 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

16 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

16 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

17 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

17 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

17 hours ago