ಬೆಂಗಳೂರು: 9823 ರೂ ಕೋಟಿ ಮೌಲ್ಯದ 9 ಕೈಗಾರಿಕಾ ಯೋಜನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಸರಿ ಸುಮಾರು 5605 ಉದ್ಯೋಗಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ.
ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಕ್ಲಿಯರೆನ್ಸ್ ಸಮಿತಿ ಸಭೆಯಲ್ಲಿ ಈ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.
ಪ್ರಮುಖವಾಗಿ ಇವುಗಳಲ್ಲಿ ಮೂರು ಹೊಸ ಹೂಡಿಕೆ ಪ್ರಸ್ತಾಪಗಳಾಗಿದ್ದರೆ, ಉಳಿದ ಆರು ಅಸ್ತಿತ್ವದಲ್ಲಿರುವ ಯೋಜನೆಗಳ ವಿಸ್ತರಣೆ ಅಥವಾ ತಿದ್ದುಪಡಿಗಳನ್ನು ಒಳಗೊಂಡಿರುತ್ತವೆ.
ಸಭೆಯಲ್ಲಿ ರಾಜ್ಯದ ಮೊದಲ ಸೆಮಿಕಂಡಕ್ಟರ್ ಯೋಜನೆಯನ್ನು ಮೈಸೂರು ಸಮೀಪದ ಕೋಚನಹಳ್ಳಿ ಎಲೆಕ್ಟ್ರಾನಿಕ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್‌ನಲ್ಲಿ ಸ್ಥಾಪಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.