ಹುಬ್ಬಳ್ಳಿ: ರಾಜ್ಯದಲ್ಲಿ ವಿಪಕ್ಷಗಳನ್ನು ಹಣಿಯಲು ರಾಜ್ಯ ಸರ್ಕಾರ ಹಿರಿಯ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ರಾಜ್ಯ ರಾಜಕಾರಣ ಕೆಳಮಟ್ಟಕ್ಕೆ ಹೋಗಿದೆ. ವಿರೋಧ ಪಕ್ಷ ಹಣಿಯಲು ಕೇಸ್ ಹಾಕಲಾಗುತ್ತಿದೆ. ಇದಕ್ಕಾಗಿಯೇ ಹಿರಿಯ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಸ್ವಜನ ಪಕ್ಷಪಾತ ನಡೆಯುತ್ತಿದೆ. ಇಂತಹ ಕೆಳಮಟ್ಟದ ರಾಜಕಾರಣ ಹಿಂದೆಂದೂ ಆಗಿರಲಿಲ್ಲ. ಇದು ಬಹಳಷ್ಟು ದಿನ ನಡೆಯಲ್ಲ ಎಂದು ಕಿಡಿಕಾರಿದರು.