ಬೆಂಗಳೂರು: ಉದ್ಯೋಗ ಕಲ್ಪಿಸುವ ವಿಧೇಯಕ ತಡೆಹಿಡಿದು ಕನ್ನಡಿಗರು ಹಾಗೂ ಕರ್ನಾಟಕಕ್ಕೆ ರಾಜ್ಯ ಸರ್ಕಾರ ಅಪಮಾನ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ವಿಧೇಯಕ ಮಂಡಿಸಿ ರಾಜ್ಯ ಸರ್ಕಾರ ಕೆಲಹೊತ್ತಿನಲ್ಲೇ ತಡೆ ನೀಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ,? ತಡೆಹಿಡಿದಿದ್ದೇಕೆ.? ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವೇಕೆ.? ಅಪಮಾನಿಸಲು ನಿಮಗೆ ಕನ್ನಡಿಗರೇ ಬೇಕಿತ್ತೆ ಎಂದು ಪ್ರಶ್ನೆ ಮಾಡಿದ್ದಾರೆ.
ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ದಿಢೀರ್ ತಡೆಹಿಡಿದು ಕನ್ನಡ, ಕರ್ನಾಟಕವನ್ನು ಅಪಮಾನಿಸಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ರಣಹೇಡಿ ನಿರ್ಧಾರವನ್ನು ಸಮಸ್ತ ಕರುನಾಡ ಜನರ ಪರವಾಗಿ ಖಂಡಿಸುತ್ತೇನೆ.
ಸಿಎಂ ಸಿದ್ದರಾಮಯ್ಯ ವಿಧೇಯಕ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಮೂರು ಬಾರಿ ಯೂ ಟರ್ನ್ ಹೊಡೆದು ಕೊನೆಗೂ ವಿಧೇಯಕ ಸದ್ಯಕ್ಕೆ ಮಂಡಿಸುತ್ತಿಲ್ಲ ಎನ್ನುವ ಅಂಜುಬುರುಕ ನಿರ್ಧಾರದ ಹಿಂದೆ ನಾಡಿನ ಆತ್ಮಗೌರವ, ಕನ್ನಡಿಗರ ಸ್ವಾಭಿಮಾನ ಹಾಗೂ ಕನ್ನಡತನವನ್ನು ಹಿಮ್ಮೆಟ್ಟಿರುವ ಕರ್ನಾಟಕ ವಿರೋಧಿ ಶಕ್ತಿಗಳ ಲಾಬಿ ಮೇಲುಗೈ ಸಾಧಿಸಿರುವಂತಿದೆ.
ಅರ್ಹತೆ ಇದ್ದರೂ ಉದ್ಯೋಗವಕಾಶಗಳಿಂದ ವಂಚಿತರಾಗಿ ಹತಾಶೆಗೊಳಗಾಗಿದ್ದ ಗ್ರಾಮೀಣ ಭಾಗದ ಲಕ್ಷಾಂತರ ನಿರುದ್ಯೋಗಿಗಳಿಗೆ ಭರವಸೆಯ ಬೆಳಕು ಮೂಡಿಸಿದ್ದ ಕನ್ನಡಿಗರ ಉದ್ಯೋಗ ಮೀಸಲಾತಿಯ ವಿಧೇಯಕ ಪ್ರಸಕ್ತ ಅಧಿವೇಶನದಲ್ಲೇ ಸರ್ಕಾರ ಮಂಡಿಸಲಿ, ಇಲ್ಲವೇ ಕನ್ನಡಿಗರ ಆಕ್ರೋಶ ಎದುರಿಸಲು ಸಿದ್ಧವಾಗಲಿ ಎಂದು ಸವಾಲು ಹಾಕಿದ್ದಾರೆ.
ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಜಗಮಗಿಸುವ ದೀಪಾಲಂಕಾರ, ಫಲಪುಷ್ಪ ಪ್ರದರ್ಶನದ ಸೊಬಗಿನ ಮಧ್ಯೆ ಪಾರಂಪರಿಕ ಪೊಲೀಸ್ ಬ್ಯಾಂಡ್‌ನ ಸದ್ದಿನೊಂದಿಗೆ…
ಕೊಳ್ಳೇಗಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಸಾಕಮ್ಮಾಸ್ ಕಾಫಿ ಪುಡಿ ಅಂಗಡಿ ಬುಧವಾರ ರಾತ್ರಿ ಸಂಪೂರ್ಣ…
ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ…
ಕೊಡಗು: ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಖಾಲಿಯಾದ ಸ್ಥಳಕ್ಕೆ…
ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…
ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…