ಬೆಂಗಳೂರು: ಅರ್ಜುನ ಆನೆ ಸಾವನ್ನಪ್ಪಿದ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಹಾಗೂ ಅದು ವಾಸವಿದ್ದ ಹೆಚ್.ಡಿ.ಕೋಟೆ ತಾಲ್ಲೂಕಿನ ಬಳ್ಳೆ ಆನೆ ಶಿಬಿರದಲ್ಲಿ ಸ್ಮಾರಕ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.
ಕಾಡಾನೆ ಕಾರ್ಯಾಚರಣೆ ವೇಳೆ ತಿವಿತಕ್ಕೊಳಗಾಗಿ ಸಾವನ್ನಪ್ಪಿದ ಅರ್ಜುನ ಆನೆಯ ಸ್ಮಾರಕ ನಿರ್ಮಿಸುವಂತೆ ಪ್ರಾಣಿಪ್ರಿಯರು ಆಗ್ರಹಿಸಿದ್ದರು. ಅರ್ಜುನ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ 8 ಬಾರಿ ಚಿನ್ನದ ಅಂಬಾರಿ ಹೊತ್ತು ಅತ್ಯಂತ ಶಾಂತ ರೀತಿಯಲ್ಲಿ ಸಾಗಿದ್ದನು.
ಆದ್ದರಿಂದ ಅರ್ಜುನ ಆನೆ ಮೃತಪಟ್ಟ ದಿನದಿಂದಲೇ ಅವನಿಗೆ ಸ್ಮಾರಕ ನಿರ್ಮಾಣ ಮಾಡಲೇಬೇಕು ಎಂದು ಎಲ್ಲೆಡೆ ಆಗ್ರಹ ಕೇಳಿಬರುತ್ತಿತ್ತು. ಇನ್ನು ಅರ್ಜುನ ಆನೆ ವಾಸವಿದ್ದ ಹೆಚ್.ಡಿ.ಕೋಟೆಯ ಬಳ್ಳೆ ಶಿಬಿರದಲ್ಲೂ ಆತನ ಸ್ಮಾರಕ ನಿರ್ಮಾಣ ಮಾಡಲೇಬೇಕು ಎಂಬ ಆಗ್ರಹ ಕೇಳಿಬರುತ್ತಿತ್ತು.
ಈ ಹಿನ್ನೆಲೆಯಲ್ಲಿ ಅರ್ಜುನ ಆನೆ ಸ್ಮಾರಕ ಸಂಬಂಧ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮೈಸೂರಿನಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಈಗ ರಾಜ್ಯ ಸರ್ಕಾರ ಎರಡೂ ಕಡೆ ಸ್ಮಾರಕ ನಿರ್ಮಾಣ ಮಾಡಲು ಮುಂದಾಗಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಗುದ್ದಲಿ ಪೂಜೆ ನೆರವೇರಿಸಲು ಸಿದ್ಧತೆ ನಡೆಸಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…