ರಾಜ್ಯ

ರಾಜ್ಯದಲ್ಲಿ ಇನ್ನು ಆರು ದಿನ ಮಳೆಯ ಆರ್ಭಟ

ಬೆಂಗಳೂರು : ರಾಜ್ಯದಲ್ಲಿ ೬ ದಿನ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ ಒಂದು ವಾರದಿಂದ ರಾಜ್ಯದ ಕರಾವಳಿ ಭಾಗದಲ್ಲಿ ವರುಣ ಅಬ್ಬರಿಸುತ್ತಿದ್ದು, ಇಂದಿನಿಂದ ೬ ದಿನಗಳವರೆಗೆ ಮಳೆ ಮುಂದುವರೆಯಲಿದೆ. ಈ ಕಾರಣದಿಂದ ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಕೂಡ ಇಂದಿನಿಂದ ೫ ದಿನ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಇನ್ನು ಬೆಂಗಳೂರಿನಲ್ಲಿಯೂ ಕೂಡ ೪ ದಿನ ಮೋಡ ಕವಿದ ವಾತಾವರಣದವಿರಲಿದ್ದು, ನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ೨೮ ಡಿಗ್ರಿ ಸೆಲ್ಸಿಯಸ್‌ , ಕನಿಷ್ಠ ೨೧ ಡಿಗ್ರಿ ಸೆಲ್ಸಿಯಸ್‌ ದಾಖಲಾಗಲಿದೆ. ಮೈಸೂರಿನಲ್ಲಿ ಗರಿಷ್ಠ ತಾಪಮಾನ ೨೮ ಡಿಗ್ರಿ ಸೆಲ್ಸಿಯಸ್‌ , ಕನಿಷ್ಠ ೨೧ ಡಿಗ್ರಿ ಸೆಲ್ಸಿಯಸ್‌ ಹಾಗೂ ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ ೨೧ ಡಿಗ್ರಿ ಸೆಲ್ಸಿಯಸ್‌ , ಕನಿಷ್ಠ ೧೭ ಡಿಗ್ರಿ ಸೆಲ್ಸಿಯಸ್‌ , ಇನ್ನು ಶಿವಮೊಗ್ಗದಲ್ಲಿ ಗರಿಷ್ಠ ತಾಪಮಾನ ೨೬ ಡಿಗ್ರಿ ಸೆಲ್ಸಿಯಸ್‌ , ಕನಿಷ್ಠ ೨೨ ಡಿಗ್ರಿ ಸೆಲ್ಸಿಯಸ್‌ ದಾಖಲಾಗಲಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಅರಣ್ಯದಲ್ಲಿ ಮಾನವನ ಹಸ್ತಕ್ಷೇಪ; ನಗರಕ್ಕೂ ಚಿರತೆ ದಾಂಗುಡಿ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಆತಂಕ ಒಂದು ವರ್ಷದಲ್ಲಿ ೨೫ ಚಿರತೆಗಳ ಸೆರೆ ಅರಣ್ಯ ಇಲಾಖೆಯಿಂದ ಜನ…

9 mins ago

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

10 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

10 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

11 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

12 hours ago