ರಾಜ್ಯ

ಕರ್ನಾಟಕ ಹೈಕೋರ್ಟ್‌ : 70 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ.

ಕಾನೂನು ಪದವಿ ಸೇರಿದಂತೆ ವಿವಿಧ ಪದವೀಧರರು ಅರ್ಹರಾಗಿದ್ದು, ವಯೋಮಿತಿ 18-40 ವರ್ಷಗಳು. ಪೂರ್ವಭಾವಿ, ಮುಖ್ಯ ಪರೀಕ್ಷೆ, ಸ್ಟೆನೋಗ್ರಫಿ ಹಾಗೂ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ಆಸಕ್ತರು ಏಪ್ರಿಲ್ 15ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ವೇತನ ಶ್ರೇಣಿ
ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 70 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಇದರಲ್ಲಿ ಆರ್‌ಪಿಸಿ ವಿಭಾಗಕ್ಕೆ 59 ಹುದ್ದೆಗಳು ಹಾಗೂ ಕೆಕೆಆರ್ ವಿಭಾಗಕ್ಕೆ 11 ಹುದ್ದೆಗಳನ್ನು ಮೀಸಲಿಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುವ ಅವಕಾಶವಿದ್ದು, ಮಾಸಿಕ ರೂ. 44,900 ರಿಂದ 1,42,400/- ವರೆಗಿನ ಆಕರ್ಷಕ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕದ ವಿವರ
ಈ ನೇಮಕಾತಿಗೆ ಸಂಬಂಧಿಸಿದಂತೆ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳಿಗೆ ಪ್ರತ್ಯೇಕ ಶುಲ್ಕ ನಿಗದಿಪಡಿಸಲಾಗಿದೆ.

ಪೂರ್ವಭಾವಿ ಪರೀಕ್ಷೆ: ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ. 500/-, ಹಾಗೂ ಎಸ್‌ಸಿ/ಎಸ್‌ಟಿ/ಪ್ರವರ್ಗ-I/ಅಂಗವಿಕಲ ಅಭ್ಯರ್ಥಿಗಳಿಗೆ 250 ರೂ.

ಮುಖ್ಯ ಪರೀಕ್ಷೆ
ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ. 1,500/-, ಹಾಗೂ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ರೂ. 750/- ಇರಲಿದೆ. ಶುಲ್ಕವನ್ನು ಆನ್‌ಲೈನ್ ಮೋಡ್ ಮೂಲಕ ಪಾವತಿಸಬೇಕಾಗುತ್ತದೆ.

ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಸುವ ವಿಧಾನ
ಅಭ್ಯರ್ಥಿಗಳನ್ನು ಪೂರ್ವಭಾವಿ ಪರೀಕ್ಷೆ, ಮುಖ್ಯ ಲಿಖಿತ ಪರೀಕ್ಷೆ, ಸ್ಟೆನೋಗ್ರಫಿ ಪರೀಕ್ಷೆ ಹಾಗೂ ಅಂತಿಮವಾಗಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಸಕ್ತರು ಹೈಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ Karnataka-High-Court-Recruitment-2026 ಭೇಟಿ ನೀಡಿ, ಅಧಿಸೂಚನೆಯನ್ನು ಪೂರ್ಣವಾಗಿ ಓದಿ ನಂತರ ಅಗತ್ಯ ದಾಖಲೆಗಳಾದ ಐಡಿ ಪ್ರೂಫ್, ಶೈಕ್ಷಣಿಕ ಪ್ರಮಾಣಪತ್ರಗಳು ಮತ್ತು ಭಾವಚಿತ್ರವನ್ನು ಅಪ್‌ಲೋಡ್ ಮಾಡುವ ಮೂಲಕ ಫಾರ್ಮ್ ಭರ್ತಿ ಮಾಡಬೇಕು.

ಆಂದೋಲನ ಡೆಸ್ಕ್

Recent Posts

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

55 mins ago

ಇರಾನ್‌ ಈವರೆಗೆ 400ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದೆ ; ಇಸ್ರೇಲ್‌

ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್‌ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…

2 hours ago

ಏಪ್ರಿಲ್ 1ರಿಂದ ಜಾರಿ ಟೋಲ್‌ ದರ ಹೆಚ್ಚಳ ; ಮೈ-ಬೆಂ ಹೆದ್ದಾರಿ ಪ್ರಯಾಣವೂ ದುಬಾರಿ

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…

2 hours ago

ಮಧ್ಯಪ್ರಾಚ್ಯ ಸಂಘರ್ಷ : ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…

3 hours ago

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…

4 hours ago

ಒಮ್ಮತದ ಅಭ್ಯರ್ಥಿ ಆಯ್ಕೆ ಆಗಿದೆ ; ಅಲ್ಪಸಂಖ್ಯಾತರು ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ : ಡಿಸಿಎಂ ಡಿ.ಕೆ

ಬೆಂಗಳೂರು : ದಾವಣಗೆರೆ ಮತ್ತು ಬಾಗಲಕೋಟೆ ಉಪ ಚುನಾವಣೆಗೆ ಕಾಂಗ್ರೆಸ್‌ನಿಂದ ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಆಗಿದೆ ಎಂದು ಉಪ ಮುಖ್ಯಮಂತ್ರಿ…

4 hours ago