ರಾಜ್ಯ

ಮೈಸೂರು| ಬಿಜೆಪಿ ಪ್ರತಿಭಟನೆಗೆ ಷರತ್ತುಬದ್ಧ ಅನುಮತಿ: ಹೈಕೋರ್ಟ್‌

ಮೈಸೂರು: ನಗರದ ಉದಯಗಿರಿ ಪೊಲೀಸ್‌ ಠಾಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪಕ್ಷ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲು ಹೈಕೋರ್ಟ್‌ ಷರತ್ತು ಬದ್ಧ ಅನುಮತಿ ನೀಡಿದೆ.

ಉದಯಗಿರಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆಗೆ ಅನುಮತಿ ನೀಡಲು ನಿರಾಕರಿಸಿದ್ದನ್ನು ಪ್ರಶ್ನಿಸಿ ಇಂದು(ಫೆಬ್ರವರಿ.24) ಬಿಜೆಪಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಈ ಅರ್ಜಿ ವಿಚಾರಣೆಯನ್ನು ನಡೆಸಿದ ಹೈಕೋರ್ಟ್‌, ಬಿಜೆಪಿ ಪ್ರತಿಭಟನೆಗೆ ಅನುಮತಿ ನೀಡಿದ್ದು, ಷರತ್ತು ಬದ್ಧ ನಿಯಮಗಳನ್ನು ವಿಧಿಸಿದೆ. ಅಲ್ಲದೇ ಈ ಪ್ರತಿಭಟನೆಯನ್ನು ಶಾಂತಿಯುತವಾಗಿ ನಡೆಸಬೇಕು. ಧರಣಿಯ ವೇಳೆ ವಿಡಿಯೋ ಮಾಡಬೇಕು ಎಂದು ಮೈಸೂರು ಆಯುಕ್ತರಿಗೆ ಸೂಚನೆ ನೀಡಿದೆ.

ಹೈಕೋರ್ಟ್‌ ಹೇಳಿದ್ದೇನು?

ಬಜೆಪಿ ಪ್ರತಿಭಟನೆಯನ್ನು ಇಂದು ಮಧ್ಯಾಹ್ನ 3.30 ಗಂಟೆಯ ವೇಳೆಗೆ ಫುಟ್‌ಬಾಲ್‌ ಮೈದಾನದಲ್ಲಿ ಪ್ರತಿಭಟನೆಗೆ ಅನುಮತಿ ನೀಡಿದ್ದು, ಧರಣಿಯಲ್ಲಿ 300 ಕ್ಕಿಂತ ಅಧಿಕ ಮಂದಿ ಸೇರುವಂತಿಲ್ಲ. ಧರಣಿ ಸಂದರ್ಭದಲ್ಲಿ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಬಾರದು ಎಂದು ಆದೇಶಿಸಿದೆ.

ಇನ್ನು ಪ್ರತಿಭಟನೆ ಆಯೋಜಕರಿಗೆ 1 ಲಕ್ಷ ರೂ. ದಂಡ ವಿಧಿಸಲು ತಿಳಿಸಿದ್ದು, ಪ್ರತಿಭಟನೆಯ ವೇಳೆ ಅಹಿತಕರ ಘಟನೆ ಸಂಭವಿಸಿದರೆ ಅರ್ಜಿದಾರರೇ ಹೊಣೆಯಾಗಿರುತ್ತಾರೆ ಎಂದು ತಿಳಿಸಿದೆ.

ಅರ್ಚನ ಎಸ್‌ ಎಸ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

5 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

6 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

8 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

10 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

10 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

10 hours ago