ಬೆಂಗಳೂರು: ಕನ್ನಡದಲ್ಲಿ ತೀರ್ಪು ನೀಡಿ ಕರ್ನಾಟಕ ಹೈಕೋರ್ಟ್ ಹೊಸ ಇತಿಹಾಸ ಬರೆದಿದೆ.
ಕನ್ನಡ ಆಡಳಿತ ಭಾಷೆಯಷ್ಟೇ ಅಲ್ಲ. ನ್ಯಾಯದಾನದ ಭಾಷೆಯೂ ಕನ್ನಡ ಆಗಬೇಕು ಎನ್ನುವ ಕೂಗಿಗೆ ಸ್ಪಂದಿಸಿದ ಹೈಕೋರ್ಟ್ ಇಂದು ಕನ್ನಡದಲ್ಲೇ ತೀರ್ಪು ನೀಡಿದೆ.
ನ್ಯಾಯಮೂರ್ತಿ ಎಸ್.ದೀಕ್ಷಿತ್, ಸಿಎಂ ಜೋಶಿ ಅವರಿದ್ದ ವಿಭಾಗೀಯ ಪೀಠವು ನೀಡಿದ ಈ ತೀರ್ಪು ಭಾರತ ಭಾಷಾ ದಿನವನ್ನು ಸ್ಮರಣೀಯವಾಗಿಸಿದೆ.
ಪಟ್ಟನಾಯಕನಹಳ್ಳಿ ಮಠದ ಸ್ವಾಮೀಜಿಗೆ ಸಂಬಂಧಿಸಿದ ಪ್ರಕರಣದಲ್ಲಿ ವಿಭಾಗೀಯ ಪೀಠ ಕನ್ನಡದಲ್ಲಿ ತೀರ್ಪು ನೀಡಿದೆ.
ತೀರ್ಪಿನ ಆಪರೇಟಿವ್ ಭಾಗವನ್ನು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಕನ್ನಡದಲ್ಲಿಯೇ ಓದಿದ್ದಾರೆ.
ಕನ್ನಡ ಅವಸಾನ ಆಗಬಾರದು ಎಂದರೆ ಕನ್ನಡಕ್ಕೆ ಮಾನ್ಯತೆ ಸಿಗಬೇಕು. ಸಾಂವಿಧಾನಿಕ ಸಂಸ್ಥೆಗಳಲ್ಲಿಯೂ ಕನ್ನಡದಲ್ಲೇ ವ್ಯವಹಾರ ನಡೆಯಬೇಕು ಎಂದು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಪ್ರತಿಪಾದಿಸಿದ್ದಾರೆ.
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…