ಬೆಂಗಳೂರು: ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಒತ್ತು ನೀಡುವ ಕರ್ನಾಟಕ, ರಾಷ್ಟ್ರದಲ್ಲೇ ಅತಿ ಹೆಚ್ಚು ಸಾರ್ವಜನಿಕ ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್‌ಗಳನ್ನು ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಕೇಂದ್ರ ಇಂಧನ ಸಚಿವಾಲಯದ ಬ್ಯೂರೋ ಆಫ್ ಎನರ್ಜಿ ಎಫಿನ್ಸಿಯಲ್ಲಿ ಬಿಡುಗಡೆ ಮಾಡಿರುವ ವರದಿ ಪ್ರಕಾರ ರಾಜ್ಯದಲ್ಲಿ ಒಟ್ಟು 5765 ಇವಿ ಚಾರ್ಜಿಂಗ್ ಸ್ಟೇಷನ್‌ಗಳಿವೆ. ಸುಸ್ಥಿರ ಮತ್ತು ಶುದ್ಧ ಇಂಧನ ಬಳಕೆ ವಿಚಾರದಲ್ಲಿ ರಾಜ್ಯ ಸರ್ಕಾರದ ಬದ್ಧತೆಗೆ ಇದು ಸಾಕ್ಷಿಯಾಗಿದೆ.
ಎಲೆಕ್ಟ್ರಿಕ್ ವಾಹನ ಪರಿಸರ ವ್ಯವಸ್ಥೆಗೆ ಒತ್ತು ನೀಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ 2024ರ ರಾಜ್ಯ ಬಜೆಟ್‌ನಲ್ಲಿ ಸಾರ್ವಜನಿಕ ಸಹಭಾಗಿತ್ವದ ಮಾದರಿಯಲ್ಲಿ ರಾಜ್ಯಾದ್ಯಂತ ಸುಮಾರು 2500 ಹೊಸ ಇವಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವ ಪ್ರಸ್ತಾವನೆ ಇದೆ.
ಇದಲ್ಲದೇ ವಿದ್ಯುತ್ ಸರಬರಾಜು ಕಂಪನಿಗಳ ಸಹಯೋಗದೊಂದಿಗೆ 100 ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರವು 35 ಕೋಟಿ ರೂ ಹೂಡಿಕೆ ಮಾಡಲು ಯೋಜಿಸಿದೆ ಎಂದು ಸಚಿವ ಜಾರ್ಜ್ ಸಂತೋಷ ವ್ಯಕ್ತಪಡಿಸಿದ್ದಾರೆ.





