ಉಡುಪಿ: ರಾಜ್ಯದಲ್ಲಿ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸುತ್ತಿದ್ದು, ಇಂದು ಉಡುಪಿಯಲ್ಲಿ ಸಾವಿರಾರು ಕಾರ್ಯಕರ್ತರು ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜನಾಕ್ರೋಶ ಯಾತ್ರೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ರಾಜ್ಯವನ್ನು ಭ್ರಷ್ಟಾಚಾರದಲ್ಲಿ ನಂಬರ್.1ಗೆ ತಲುಪಿಸಿದ ಕೀರ್ತಿ ಸಿಎಂ ಸಿದ್ದರಾಮಯ್ಯರಿಗೆ ಸಲ್ಲುತ್ತದೆ ಎಂದು ಕಿಡಿಕಾರಿದ್ದಾರೆ.
ಬಿಜೆಪಿ ಸರ್ಕಾರವಿದ್ದಾಗ ಕರ್ನಾಟಕ ಅಭಿವೃದ್ಧಿಯಲ್ಲಿ 2ನೇ ಸ್ಥಾನದಲ್ಲಿತ್ತು. ಅಭಿವೃದ್ಧಿಯಲ್ಲಿ ಗುಜರಾತ್ ನಂತರ ಕರ್ನಾಟಕ 2ನೇ ಸ್ಥಾನದಲ್ಲಿತ್ತು. ಈಗ ಭ್ರಷ್ಟಾಚಾರದಲ್ಲಿ ನಂಬರ್.1 ತಲುಪಿದೆ. ಇದರ ಕೀರ್ತಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಇದರಿಂದ ಜನಸಾಮಾನ್ಯರು ತೀವ್ರ ಸಂಕಷ್ಟ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆಲ್ಲಾ ಕಾರಣ ಸಿಎಂ ಸಿದ್ದರಾಮಯ್ಯ ಅವರೇ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲಾಗದೇ ಎಲ್ಲಾ ವಸ್ತುಗಳ ಬೆಲೆ ಏರಿಕೆ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…