ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು ನಕ್ಸಲ್ ಮುಕ್ತ ರಾಜ್ಯವನ್ನಾಗಿ ಮಾಡಿದ್ದೇವೆ ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಹೇಳಿದರು.
ಕೋರಮಂಗಲದ ಕೆಎಸ್‌ಆರ್‌ಪಿ ಪರೇಡ್ ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆ ಹಾಗೂ ಮುಖ್ಯಮಂತ್ರಿಗಳ ಪದಕ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಪದಕ ಪುರಸ್ಕೃತರನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಗೃಹಸಚಿವರು ದೇಶವನ್ನು ನಕ್ಸಲ್ ಮುಕ್ತ ಮಾಡಿದ್ದೇವೆ ಎಂದು ಹೇಳಿದ್ದಾರೆ. ಆದರೆ ಮೊದಲು ನಕ್ಸಲ್ ಮುಕ್ತ ರಾಜ್ಯ ಮಾಡಿದ್ದು ನಾವು ಎಂದರು.
ಕರ್ನಾಟಕ ಪೊಲೀಸ್ ಇಲಾಖೆ ದೇಶದಲ್ಲೇ ಅತ್ಯಂತ ಉತ್ತಮವಾದ ಪೊಲೀಸ್ ವ್ಯವಸ್ಥೆ ಎಂಬ ಬಿರುದಿಗೆ ಪಾತ್ರವಾಗಿದೆ. 1965ರ ಏ.2ರಂದು ಪೊಲೀಸ್ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ರಾಜ್ಯ ಪೊಲೀಸರನ್ನು ಒಟ್ಟುಗೂಡಿಸಿ, ಶಿಸ್ತಿನಿಂದ ನಡೆಸುವ ಸಂದರ್ಭವನ್ನು ಪೊಲೀಸ್ ಧ್ವಜ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ಹೇಳಿದರು.
ರಾಜ್ಯದಲ್ಲಿ ಶಾಂತಿ, ನೆಮ್ಮದಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇಂಡಿಯಾ ಜಸ್ಟಿಸ್ ವರದಿ ಪ್ರಕಾರ ದೇಶದಲ್ಲಿ ನೊಂದವರಿಗೆ ನ್ಯಾಯ ನೀಡುವುದರಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂಬುದು ಗೊತ್ತಾಗಿದೆ. ವಿಶೇಷವಾಗಿ ನ್ಯಾಯ ಒದಗಿಸುವುದರಲ್ಲಿ ಪೊಲೀಸ್ ಇಲಾಖೆ ಉತ್ತಮ ಕೆಲಸ ಮಾಡಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…
ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…
ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…
ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…
ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…