ಕಪಟಿಗಳ ದ್ವೇಷದ ಪಿತೂರಿಗೆ ಮಹನೀಯರ ಮಾನವೀಯ ಆಶಯಗಳು ಬಲಿಯಾಗಬಾರದು: ಸಿಎಂ ಕರೆ
ಬೆಂಗಳೂರು: ಕರ್ನಾಟಕ ರಾಜ್ಯ ಕುವೆಂಪು, ಅಂಬೇಡ್ಕರ್, ಬಸವಣ್ಣನವರ ಮಾನವೀಯ ಮೌಲ್ಯದ ನೆಲೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಣ್ಣಿಸಿದರು.
ಶಿವಾಜಿನಗರದ ಐತಿಹಾಸಿಕ ಬೆಸಿಲಿಕಾ ಚರ್ಚ್ ನಲ್ಲಿ ನಡೆದ ಸೇಂಟ್ ಮೇರಿ ಅಮ್ಮನವರ ಹುಟ್ಟು ಹಬ್ಬದ ಆಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಪಟಿಗಳ ದ್ವೇಷದ ಪಿತೂರಿಗೆ ಮಹನೀಯರ ಮಾನವೀಯ ಆಶಯಗಳು ಬಲಿಯಾಗಬಾರದು. ಪರಸ್ಪರ ಸಹಬಾಳ್ವೆ, ಸೌಹಾರ್ದದ ಬೆಸುಗೆಯನ್ನು ನಾವೆಲ್ಲರೂ ಗಟ್ಟಿಗೊಳಿಸಬೇಕು ಎಂದು ಕರೆ ನೀಡಿದರು.
ಶಿವಾಜಿನಗರದ ಬೆಸಿಲಿಕಾ ಮಂದಿರ ಚಾರಿತ್ರಿಕವಾಗಿ ಸೌಹಾರ್ದ ಮಂದಿರವಾಗಿದೆ. ಎಲ್ಲಾ ಜಾತಿಯ, ಎಲ್ಲಾ ಧರ್ಮದವರು ಈ ಪ್ರಾರ್ಥನಾ ಮಂದಿರಕ್ಕೆ ನಿರಂತರವಾಗಿ ಬಂದು ಹೋಗುತ್ತಿರುವುದೇ ಈ ಮಂದಿರದ ಸೌಹಾರ್ದ ಪರಂಪರೆಗೆ ಸಾಕ್ಷಿ ಎಂದರು.
ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕ್ರೈಸ್ತ ಧರ್ಮ ಗುರುಗಳ ಮತ್ತು ಸಂಸ್ಥೆಗಳ ಕೊಡುಗೆಯನ್ನು ಪ್ರತಿಯೊಬ್ಬರೂ ಮೆಚ್ಚಿಕೊಳ್ಳುತ್ತಾರೆ. ಇವರ ಈ ಸಾಮಾಜಿಕ ಕಾರ್ಯ ಪ್ರತಿಯೊಬ್ಬರಿಗೂ ಮಾದರಿಯಾಗಲಿ ಎಂದು ಹರೈಸಿದರು.
ಬೆಸಿಲಿಕಾ ಚರ್ಚ್ ನ ಪುನರುಜ್ಜೀವನಕ್ಕೆ ಐದು ಕೋಟಿಗಳ ನೆರವನ್ನು ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.
ಶಾಸಕರಾದ ರಿಜ್ವಾನ್ ಅರ್ಷದ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮ ಆರ್ಚ್ ಬಿಷಪ್ ಡಾ.ಪೀಟರ್ ಮಚಾಡೊ ಅವರು ದಿವ್ಯ ಸಾನಿದ್ಯ ವಹಿಸಿದ್ದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಮುಖ್ಯ ಅತಿಥಿಗಳಾಗಿದ್ದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…