ರಾಜ್ಯ

ಸತ್ಯ ಹರಿಶ್ಚಂದ್ರ ಮಹಾರಾಜರಿಗೆ ಅಪಮಾನ ಮಾಡಬೇಡಿ: ಚಲುವರಾಯಸ್ವಾಮಿ ವಿರುದ್ಧ ಜೆಡಿಎಸ್‌ ಕಿಡಿ

ಬೆಂಗಳೂರು: ಸತ್ಯಕ್ಕಾಗಿ ಸಿಂಹಾಸನವನ್ನೇ ತೃಣದಂತೆ ಕಂಡಿದ್ದ ಸತ್ಯ ಹರಿಶ್ಚಂದ್ರ ಮಹಾರಾಜರಿಗೆ ಅಪಮಾನ ಮಾಡಬೇಡಿ. ಆ ಪುಣ್ಯ ಪುರುಷರ ಹೆಸರಿಗೆ ಮಸಿ ಬಳಿದು ಪಾಪ ಕಟ್ಟಿಕೊಳ್ಳಬೇಡಿ ಎಂದು ಸಚಿವ ಎನ್.ಚಲುವರಾಯಸ್ವಾಮಿ ವಿರುದ್ಧ ಜೆಡಿಎಸ್‌ ಕಿಡಿಕಾರಿದೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌, ಸತ್ಯ ನಮ್ಮಪ್ಪನ ಮನೆ ಜಹಗೀರು ಎಂದು ಪೋಸು ಕೊಡುತ್ತಿರುವ ಸಚಿವ ಚಲುವರಾಯಸ್ವಾಮಿ ಅವರೇ ಸುಳ್ಳು ಹೇಳುವುದನ್ನು, ಹಬ್ಬಿಸುವುದನ್ನು ನಿಲ್ಲಿಸಿ. ಹಿಟ್ಲರನ ಮಂತ್ರಿ ಗೋಬೆಲ್ ಚಾಳಿ ಬಿಡಿ ಎಂದು ವಾಗ್ದಾಳಿ ನಡೆಸಿದೆ.

ಮಾಜಿ ಸಂಸದೆ ಸುಮಲತಾ ಅವರು ಬಳಸಿದ್ದ ಕಾರು ಬಳಸುವುದಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆಯೇ? ಒಂದು ವೇಳೆ ಹೇಳಿದ್ದರೆ ಎಲ್ಲಿ, ಯಾವಾಗ, ಯಾರಿಗೆ ಹೇಳಿದ್ದರು? ಅಥವಾ ಈ ಬಗ್ಗೆ ರಾಜ್ಯ ಸರಕಾರಕ್ಕೆ ಪತ್ರವನ್ನೀನಾದರೂ ಬರೆದಿದ್ದರೇ? ನೀವು ದಾಖಲೆ ಸಮೇತ ಹೇಳಬೇಕಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಸಂಸದರಿಗೆ ಕೊಡಲಾಗುವ ಕಾರಿನ ಮೇಲೆ ಯಾರ ಮಾಲಿಕತ್ವವೂ ಇರುವುದಿಲ್ಲ. ಅದು ಹಿಂದಿನ ಸಂಸದರದೂ ಅಲ್ಲ, ಈಗಿನ ಸಂಸದರದೂ ಅಲ್ಲ ಎಂಬ ಸಾಮಾನ್ಯ ತಿಳಿವಳಿಕೆ ಸಂಪುಟ ದರ್ಜೆ ಸಚಿವರಾದ ನಿಮಗಿಲ್ಲವಲ್ಲ. ರಾಜ್ಯದ ಎಲ್ಲಾ ಸಂಸದರಿಗೂ ಕಾಂಗ್ರೆಸ್‌ ಸರ್ಕಾರದ ವತಿಯಿಂದ ಹೊಸ ಕಾರುಗಳನ್ನು ಕೊಡಲಾಯಿತು. ಆದರೆ, ಮಂಡ್ಯ ಮತ್ತು ಕೋಲಾರದ ಸಂಸದರಾದ ಎಚ್.ಡಿ.ಕುಮಾರಸ್ವಾಮಿ ಮತ್ತು ಮಲ್ಲೇಶ್ ಬಾಬು ಅವರಿಗೆ ಹಳೆಯ ಕಾರುಗಳನ್ನು ಕೊಡಲಾಯಿತು. ಎಂದು ಯಾಕೆ ಹೇಳುತ್ತೀರಾ ಚೆಲುವರಾಯಸ್ವಾಮಿ ಅವರೇ? ಎಂದು ಆಕ್ರೋಶ ವ್ಯಕ್ಯಪಡಿಸಿದೆ.

ಐದು ವರ್ಷಗಳ ಹಳೆಯ ಕಾರಿನ ಬದಲು ಹೊಸ ಕಾರು ಕೊಡಿ ಎಂದು ಕೇಂದ್ರ ಸಚಿವರು ಕೇಳಿದ್ದರು. ಅದರಲ್ಲಿ ತಪ್ಪೇನಿದೆ? ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯಲ್ಲಿ ಹೊಸ ಕಾರುಗಳ ಕಥೆ ಹೊಸದಲ್ಲ, ನಿಮ್ಮ ಕಾರುಬಾರು ಕೂಡ ಜೋರಾಗಿ ನಡೆದಿದೆಯಲ್ಲ ? ಎಂದು ತಿರುಗೇಟು ನೀಡಿದೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ:  ಮರ್ಯಾದಾ ಹತ್ಯೆಯಲ್ಲಿ ಜಾತಿ ಜೀವಂತಿಕೆ

ಜಾತಿ ವ್ಯವಸ್ಥೆಯು ಅಸಮಾನತೆಯನ್ನು ಸೃಷ್ಟಿ ಮಾಡಿದೆ. ಈ ಜಾತಿ ವ್ಯವಸ್ಥೆ ಈಗಲೂ ಜೀವಂತ ವಾಗಿದೆ ಎನ್ನುವುದಕ್ಕೆ ಬೇರೆ ಜಾತಿಯ ಹುಡುಗನನ್ನು…

9 mins ago

ಓದುಗರ ಪತ್ರ:  ಚಲನಚಿತ್ರ ರಂಗದಲ್ಲಿ ಏನಿದು ಗದ್ದಲ?

೬೦ರ ದಶಕದ ಸಿನಿಮಾರಂಗ ಯಾವ ಗಲಾಟೆ ಇಲ್ಲದೆ ಸಾಗಿತ್ತು. ರಾಜಕುಮಾರ್ ಅವರ ಸಮಕಾಲಿನ ನಟರಾದ ಕಲ್ಯಾಣ್ ಕುಮಾರ್, ಶ್ರೀನಾಥ್, ನರಸಿಂಹರಾಜು,…

10 mins ago

ಓದುಗರ ಪತ್ರ: ಚಾಮುಂಡಿಬೆಟ್ಟ ಯಥಾಸ್ಥಿತಿಯಲ್ಲೇ ಇರಲಿ

ನಾಡದೇವತೆಯಾದ ಶ್ರೀ ಚಾಮುಂಡೇಶ್ವರಿ ನೆಲೆಸಿರುವ ಬೆಟ್ಟವನ್ನು ಯಥಾಸ್ಥಿತಿಯಲ್ಲಿ ಇರುವಂತೆ ಉಳಿಸಿಕೊಳ್ಳುವುದು ಮೈಸೂರಿಗರ ಆದ್ಯ ಕರ್ತವ್ಯವಾಗಿದೆ. ಸಂರಕ್ಷಿತ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ…

12 mins ago

ಓದುಗರ ಪತ್ರ: ಪುಸ್ತಕ ಉಡುಗೊರೆ ಸಂಸ್ಕೃತಿ ಬೆಳೆಸಿ

ಚಿತ್ರದುರ್ಗದ ಪೇಟೆ ಬೀದಿಯ ಉಡುಗೊರೆ (ಗಿಫ್ಟ್) ಮಾರಾಟ ಮಳಿಗೆ ಮಕ್ಕಳು ಮತ್ತು ಪೋಷಕರಿಂದ ತುಂಬಿ ಹೋಗಿತ್ತು. ಅಲ್ಲಿದ್ದ ಹುಡುಗರನ್ನು ಏಕೆ…

27 mins ago

ಪ್ರೀತಿ, ಸೌಹಾರ್ದತೆಯ ಸಂದೇಶ ಸಾರುವ ಕ್ರಿಸ್ತ ಜಯಂತಿ

- ಡಾ.ಐ.ಸೇಸುನಾಥನ್ ‘ಒಬ್ಬ ನಿನ್ನ ಬಲಗೆನ್ನೆಗೆ ಹೊಡೆದರೆ ಅವನಿಗೆ ನಿನ್ನ ಇನ್ನೊಂದು ಕೆನ್ನೆಗೂ ಹೊಡೆಯಲು ಅನುವು ಮಾಡಿಕೊಡು; ನಿನ್ನ ಮೇಲಂಗಿಯನ್ನು…

1 hour ago

2025 ಸವಿನೆನಪು: ಸ್ಯಾಂಡಲ್‌ವುಡ್ ಏಳು-ಬೀಳು

‘ಸ್ಯಾಂಡಲ್ ವುಡ್’ ಎಂದೇ ಹೆಸರಾಗಿರುವ ಕನ್ನಡ ಚಿತ್ರರಂಗ ಇಂದು ಭಾರತದ ಒಂದು ಪ್ರಮುಖ ಚಿತ್ರೋದ್ಯಮವಾಗಿ ಬೆಳೆದಿದೆ. ಈ ಮೊದಲು ಪ್ರತಿ…

3 hours ago