ಬೆಂಗಳೂರು: ಕೆಪಿಎಸ್‌ಸಿ ವತಿಯಿಂದ ನಿನ್ನೆ(ಡಿ.29) ಕೆಎಎಸ್ ಮರುಪರೀಕ್ಷೆ ನಡೆದಿದ್ದು, ಕನ್ನಡ ಪ್ರಶ್ನೆ ಪ್ರತಿಕೆಯಲ್ಲಿ ಹಲವಾರು ತಪ್ಪುಗಳು ಕಂಡುಬಂದಿವೆ. ಹೀಗಾಗಿ ಕಾಂಗ್ರೆಸ್ ಸರ್ಕಾರಕ್ಕೆ ಒಂದು ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ಯೋಗ್ಯತೆಯಿಲ್ಲ ಎಂದು ಜೆಡಿಎಸ್ ವಾಗ್ದಾಳಿ ನಡೆಸಿದೆ.
ಈ ಕುರಿತು ಸಾಮಾಜಿಕ ಮಾಧ್ಯಮ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಎಡವಟ್ಟು
ಕಾಂಗ್ರೆಸ್ ಸರ್ಕಾರಕ್ಕೆ ಒಂದು ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ಯೋಗ್ಯತೆ ಇಲ್ಲವಾಗಿದೆ. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ಹೊಣೆಗೇಡಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂದು ಕಿಡಿಕಾರಿದೆ.
ಪ್ರಶ್ನೆಪತ್ರಿಕೆಗಳ ಭಾಷಾಂತರದಲ್ಲಿ ಗೊಂದಲದಿಂದ ಮುಂದೂಡಿಕೆಯಾಗಿ ಭಾನುವಾರ(ಡಿ.29) ನಡೆದ ಗೆಜೆಟೆಡ್ ಪ್ರೊಬೇಷನರಿ ಪೂರ್ವಭಾವಿ ಪರೀಕ್ಷೆಯಲ್ಲಿಯೂ ಕರ್ನಾಟಕ ಲೋಕಸೇವಾ ಆಯೋಗ ಮತ್ತೆ ಎಡವಟ್ಟು ಮಾಡಿದೆ. ಕೆಎಎಸ್ ಮರು ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿ ನೂರಾರು ತಪ್ಪುಗಳು ಕಂಡು ಬಂದಿದ್ದು, ಕನ್ನಡ ಭಾಷಾಂತರದಲ್ಲಿಯೂ ಹಲವು ದೋಷಗಳು ಪತ್ತೆಯಾಗಿದೆ. ಅಲ್ಲದೇ ಅಭ್ಯರ್ಥಿಗಳ ನೋಂದಣಿ ಸಂಖ್ಯೆ ಮತ್ತು ಒಎಂಆರ್ ಶೀಟ್ ಸಂಖ್ಯೆ ಅದಲು-ಬದಲಾಗಿದ್ದು, ಕೆಪಿಎಸ್‌ಸಿ ಅಧಿಕಾರಿಗಳ ಬೇಜವಾಬ್ದಾರಿ ಮತ್ತು ಬೌದ್ಧಿಕ ದಿವಾಳಿತನವನ್ನು ಜಗಜ್ಜಾಹೀರು ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಕೆಎಎಸ್ ಪರೀಕ್ಷೆಗೆ ನಡೆಸಲು ಕೆಪಿಎಸ್‌ಸಿ ಒಟ್ಟು 28 ಕೋಟಿಗೂ ಹೆಚ್ಚು ಹಣ ಖರ್ಚು ಮಾಡಿದೆ. ಆದರೆ ಪದೇಪದೇ ತಪ್ಪು ಮಾಡುತ್ತಿರುವ ಕೆಪಿಎಸ್ ಸಿ (KPSC)ಯನ್ನು ಸುಧಾರಣೆ ಮಾಡಲು ಸಾಧ್ಯವಾಗದಷ್ಟು ದುರ್ಬಲವಾಗಿರುವ ಸಿಎಂ ಸಿದ್ದರಾಮಯ್ಯ ನೇತೃತ್ವ ಸರ್ಕಾರದಿಂದ ರಾಜ್ಯದ ಸುಧಾರಣೆ ಸಾಧ್ಯವೇ ? ಎಂದು ಪ್ರಶ್ನಿಸಿದೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…