Mysore
17
overcast clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ರಿಲೀಫ್‌: ಸಿಐಡಿಯಿಂದ ಬಿ ರಿಪೋರ್ಟ್‌ ಸಲ್ಲಿಕೆ

Big Relief for MLC Suraj Revanna: 'B' Report Submitted by CID

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಧಾನಪರಿಷತ್‌ ಸದಸ್ಯ ಸೂರಜ್‌ ರೇವಣ್ಣಗೆ ಬಿಗ್‌ ರಿಲೀಫ್‌ ದೊರೆತಿದ್ದು, ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ ಸಿಐಡಿ ಬಿ ರಿಪೋರ್ಟ್‌ ಸಲ್ಲಿಕೆ ಮಾಡಿದೆ.

ಸೂರಜ್‌ ರೇವಣ್ಣ ವಿರುದ್ಧದ ಆರೋಪ ಸಂಬಂಧ ಸಿಐಡಿ ಬಿ ರಿಪೋರ್ಟ್‌ ಸಲ್ಲಿಸಿದೆ. ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ತನಿಖೆ ನಡೆಸಿದ್ದರು.

ಸೂರಜ್‌ ರೇವಣ್ಣ ವಿರುದ್ಧ ಎರಡು ಎಫ್‌ಐಆರ್‌ ದಾಖಲಾಗಿದ್ದವು. ಆರೋಪ ಸಾಬೀತುಪಡಿಸಲು ಬೇಕಾದ ಸಾಕ್ಷ್ಯಾಧಾರಗಳ ಕೊರತೆ ಇರುವ ಪರಿಣಾಮ ಸಿಐಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್‌ ಸಲ್ಲಿಸಿದೆ.

ಏನಿದು ಪ್ರಕರಣ?

ಸೂರಜ್‌ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಕಳೆದ 2024ರ ಜೂನ್.‌22ರಂದು ಸಂತ್ರಸ್ತ ದೂರು ನೀಡಿದ್ದರು. ಇದರ ಆಧಾರದಲ್ಲಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ಜೂನ್.‌23ರಂದು ಸೂರಜ್‌ ರೇವಣ್ಣನನ್ನು ಬಂಧಿಸಲಾಗಿತ್ತು.
ನ್ಯಾಯಾಂಗ ಬಂಧನದಲ್ಲಿದ್ದ ಸೂರಜ್‌ ರೇವಣ್ಣಗೆ ಜನಪ್ರತಿನಿಧಿಗಳ ಕೋರ್ಟ್‌ ಜುಲೈ.22ರಂದು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು.

Tags:
error: Content is protected !!