Mysore
19
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ದ್ವಿಭಾಷಾ ನೀತಿಗೆ ಜಾರಿಗೆ ಒತ್ತಾಯಿಸಿ ಸಿಎಂಗೆ ಮನವಿ ಸಲ್ಲಿಸಿದ ಕನ್ನಡ ರಕ್ಷಣಾ ವೇದಿಕೆ

Siddaramaiah considers enacting a law to control fake news

ಬೆಂಗಳೂರು : ಕರ್ನಾಟಕದಲ್ಲೂ ದ್ವಿಭಾಷಾ ನೀತಿಯನ್ನು ಅನುಸರಣೆಗೆ ತರಬೇಕು ಎಂದು ಕನ್ನಡ ರಕ್ಷಣಾ ವೇದಿಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದೆ.

ವೇದಿಕೆ ಅಧ್ಯಕ್ಷ ಎಚ್.ಶಿವರಾಮೇಗೌಡ, ಡಾ.ರಾಜಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಅವರ ನೇತೃತ್ವದ ನಿಯೋಗವಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು.

ಕನ್ನಡವನ್ನು ಮೊದಲ ಭಾಷೆಯನ್ನಾಗಿ ಉಳಿಸಿಕೊಂಡು ನಂತರ ಜಾಗತಿಕ ಭಾಷೆಯಾಗಿರುವ ಇಂಗ್ಲೀಷ್ ಕಲಿಕೆಗೆ ಅವಕಾಶ ಕಲ್ಪಿಸಬೇಕು. ಈ ಎರಡೂ ಭಾಷೆಗಳ ಕಲಿಕೆಯಿಂದ ಮಕ್ಕಳಲ್ಲಿನ ಪ್ರಾವಿಣ್ಯತೆ, ಆಲೋಚನೆ, ಗ್ರಹಿಕೆ ಹಾಗೂ ಅಭಿವ್ಯಕ್ತಿಯ ಶಕ್ತಿ ವೃದ್ಧಿಸುತ್ತದೆ. ಕನ್ನಡ ಭಾಷೆ, ಸಂಸ್ಕೃತಿ, ಇತಿಹಾಸ ಮೌಲ್ಯಗಳ ಅರಿವು ಮೂಡಿಸಿದರೆ ಇಂಗ್ಲಿಷ್ ವೃತ್ತಿಪರ ವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದು ವಿವರಿಸಲಾಗಿದೆ.

ಹಲವು ಮುಂದುವರಿದ ರಾಷ್ಟ್ರಗಳು ದ್ವಿಭಾಷಾ ಶಿಕ್ಷಣವನ್ನು ಉತ್ತೇಜಿಸುತ್ತದೆ. ಹೀಗಾಗಿ ಕರ್ನಾಟಕದ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ದ್ವಿಭಾಷಾ ಪದ್ಧತಿಯನ್ನು ಜಾರಿಗೆ ತರಬೇಕು. ಕನ್ನಡ ಕಲಿಸುವ ವ್ಯವಸ್ಥೆಯನ್ನು ಪಠ್ಯಪುಸ್ತಕಗಳ ಸಹಯೋಗದಿಂದ ಸದೃಢಗೊಳಿಸಬೇಕು. ದ್ವಿಭಾಷಾ ನೀತಿಯ ಬಗ್ಗೆ ಸ್ಪಷ್ಟ ನಿರ್ಧಾರ ಮತ್ತು ಅನುಷ್ಟಾನ ಚಟುವಟಿಕೆಗಳ ಪಟ್ಟಿ ಪ್ರಕಟಿಸಬೇಕು. ನಮ್ಮ ಕರ್ನಾಟಕ, ನಮ್ಮ ಭಾಷೆ, ನಮ್ಮ ಭವಿಷ್ಯ ಧ್ಯೇಯದೊಂದಿಗೆ ದ್ವಿಭಾಷಾ ನೀತಿಯನ್ನು ಅನುಷ್ಠಾನಗೊಳಿಸುವಂತೆ ಮನವಿ ಮಾಡಲಾಗಿದೆ.

ನಿಯೋಗ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ತಾವೂ ಕೂಡ ದ್ವಿಭಾಷಾ ನೀತಿಯ ಪರವಾಗಿದ್ದು, ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಭರವಸೆ ನೀಡಿದ್ದಾರೆ.

Tags:
error: Content is protected !!