ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ಬಿಪಿಎಲ್ ಕಾರ್ಡ್‌ಗಳ ಸಂಖ್ಯೆ ಹೆಚ್ಚಿದ್ದರೂ ದೇಶದಲ್ಲೇ ಅತೀ ಹೆಚ್ಚು ತೆರಿಗೆ ಪಾವತಿ ಮಾಡುತ್ತಿರುವ ರಾಜ್ಯ ಕರ್ನಾಟಕವಾಗಿದೆ. ತಲಾ ಆದಾಯದಲ್ಲೂ ದೇಶದಲ್ಲಿ ನಂ.1 ಸ್ಥಾನದಲ್ಲಿದ್ದೇವೆ. ಇದಕ್ಕೆ ಗ್ಯಾರಂಟಿ ಯೋಜನೆಗಳ ಕೊಡುಗೆಯೂ ಮಹತ್ವದ್ದಾಗಿದೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ರಾಜ್ಯದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡುತ್ತಿರುವ ಬಗ್ಗೆ ಬೆಂಗಳೂರಿನಲ್ಲಿಂದು ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಶೇ.65ರಷ್ಟು ಬಿಪಿಎಲ್ ಕಾರ್ಡ್‌ಗಳು ಇರಬೇಕು. ಆದರೆ ನಮಲ್ಲಿ 90ಕ್ಕಿಂತಲೂ ಹೆಚ್ಚು ಬಿಪಿಎಲ್ ಕಾರ್ಡ್‌ಗಳಿವೆ. ಅರ್ಹರಿಗೆ ಬಿಪಿಎಲ್ ಸೌಲಭ್ಯ ದೊರಕಿಸಲು ಎಲ್ಲಾ ಸರ್ಕಾರಗಳು ಪ್ರಯತ್ನ ಮಾಡುತ್ತಲೇ ಇವೆ. ಅನರ್ಹರು ಸೌಲಭ್ಯ ಪಡೆದಿರುವುದನ್ನು ಪತ್ತೆ ಹಚ್ಚಲು ಪರಿಶೀಲನೆ ನಡೆಸಲಾಗುತ್ತಿದೆ ಎಂದರು.
ಇದನ್ನು ಓದಿ : ಪಾಕ್ ಜೊತೆ ಮ್ಯಾಚ್ ಆಡಿದ ಬಗ್ಗೆ ಬಿಜೆಪಿ ನಾಯಕರು ಮಾತಾಡಲಿ: ಸಚಿವ ಸಂತೋಷ್ ಲಾಡ್
ರಾಜ್ಯದಲ್ಲಿ ಒಂದೆಡೆ ಬಿಪಿಎಲ್ ಕಾರ್ಡ್‌ಗಳ ಸಂಖ್ಯೆ ಹೆಚ್ಚಿದ್ದರೂ ದೇಶದಲ್ಲೇ ಅತೀ ಹೆಚ್ಚು ತೆರಿಗೆ ಪಾವತಿ ಮಾಡುತ್ತಿರುವ ರಾಜ್ಯ ಕರ್ನಾಟಕವಾಗಿದೆ. ತಲಾ ಆದಾಯದಲ್ಲೂ ದೇಶದಲ್ಲಿ ನಂ.1 ಸ್ಥಾನದಲ್ಲಿದ್ದೇವೆ. ಇದಕ್ಕೆ ಗ್ಯಾರಂಟಿ ಯೋಜನೆಗಳ ಕೊಡುಗೆಯೂ ಮಹತ್ವದ್ದಾಗಿದೆ ಎಂದು ಹೇಳಿದರು.
ಮೃತಪಟ್ಟ ಮಹಿಳೆಯ ಖಾತೆಗೆ ಗೃಹಲಕ್ಷ್ಮಿಯೋಜನೆಯ ಹಣ ಪಾವತಿಯಾಗಿರುವುದು ಸಹಜ. ಇದು ದೊಡ್ಡ ಪ್ರಮಾಣದ ಯೋಜನೆ. ಸಣ್ಣ ಪ್ರಮಾಣದ ಲೋಪಗಳು ಇರಬಹುದು. ಪ್ರತಿವಾರ ಸಾವು-ನೋವುಗಳು ಘಟಿಸುತ್ತಿರುತ್ತವೆ. ಆ ಮಾಹಿತಿ ಕಾಲಕಾಲಕ್ಕೆ ಅಪ್‌ಡೇಟ್ ಆಗದೇ ಇದ್ದಾಗ ಲೋಪಗಳಾಗುವುದು ಸಾಮಾನ್ಯ. ಸರ್ಕಾರ ಇದನ್ನು ಪತ್ತೆ ಹಚ್ಚಿ ಸೂಕ್ತ ಕ್ರಮಕೈಗೊಳ್ಳಲಿದೆ ಎಂದು ಹೇಳಿದರು.





