ರಾಜ್ಯ

ತಲಾ ಆದಾಯದಲ್ಲೂ ಕರ್ನಾಟಕ ದೇಶದಲ್ಲಿ ನಂ.1 ಸ್ಥಾನದಲ್ಲಿದೆ: ಸಚಿವ ಸಂತೋಷ್‌ ಲಾಡ್‌

ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ಬಿಪಿಎಲ್‌ ಕಾರ್ಡ್‌ಗಳ ಸಂಖ್ಯೆ ಹೆಚ್ಚಿದ್ದರೂ ದೇಶದಲ್ಲೇ ಅತೀ ಹೆಚ್ಚು ತೆರಿಗೆ ಪಾವತಿ ಮಾಡುತ್ತಿರುವ ರಾಜ್ಯ ಕರ್ನಾಟಕವಾಗಿದೆ. ತಲಾ ಆದಾಯದಲ್ಲೂ ದೇಶದಲ್ಲಿ ನಂ.1 ಸ್ಥಾನದಲ್ಲಿದ್ದೇವೆ. ಇದಕ್ಕೆ ಗ್ಯಾರಂಟಿ ಯೋಜನೆಗಳ ಕೊಡುಗೆಯೂ ಮಹತ್ವದ್ದಾಗಿದೆ ಎಂದು ಸಚಿವ ಸಂತೋಷ್‌ ಲಾಡ್‌ ಹೇಳಿದ್ದಾರೆ.

ರಾಜ್ಯದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡುತ್ತಿರುವ ಬಗ್ಗೆ ಬೆಂಗಳೂರಿನಲ್ಲಿಂದು ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಶೇ.65ರಷ್ಟು ಬಿಪಿಎಲ್‌ ಕಾರ್ಡ್‌ಗಳು ಇರಬೇಕು. ಆದರೆ ನಮಲ್ಲಿ 90ಕ್ಕಿಂತಲೂ ಹೆಚ್ಚು ಬಿಪಿಎಲ್‌ ಕಾರ್ಡ್‌ಗಳಿವೆ. ಅರ್ಹರಿಗೆ ಬಿಪಿಎಲ್‌ ಸೌಲಭ್ಯ ದೊರಕಿಸಲು ಎಲ್ಲಾ ಸರ್ಕಾರಗಳು ಪ್ರಯತ್ನ ಮಾಡುತ್ತಲೇ ಇವೆ. ಅನರ್ಹರು ಸೌಲಭ್ಯ ಪಡೆದಿರುವುದನ್ನು ಪತ್ತೆ ಹಚ್ಚಲು ಪರಿಶೀಲನೆ ನಡೆಸಲಾಗುತ್ತಿದೆ ಎಂದರು.

ಇದನ್ನು ಓದಿ : ಪಾಕ್‌ ಜೊತೆ ಮ್ಯಾಚ್‌ ಆಡಿದ ಬಗ್ಗೆ ಬಿಜೆಪಿ ನಾಯಕರು ಮಾತಾಡಲಿ: ಸಚಿವ ಸಂತೋಷ್‌ ಲಾಡ್‌

ರಾಜ್ಯದಲ್ಲಿ ಒಂದೆಡೆ ಬಿಪಿಎಲ್‌ ಕಾರ್ಡ್‌ಗಳ ಸಂಖ್ಯೆ ಹೆಚ್ಚಿದ್ದರೂ ದೇಶದಲ್ಲೇ ಅತೀ ಹೆಚ್ಚು ತೆರಿಗೆ ಪಾವತಿ ಮಾಡುತ್ತಿರುವ ರಾಜ್ಯ ಕರ್ನಾಟಕವಾಗಿದೆ. ತಲಾ ಆದಾಯದಲ್ಲೂ ದೇಶದಲ್ಲಿ ನಂ.1 ಸ್ಥಾನದಲ್ಲಿದ್ದೇವೆ. ಇದಕ್ಕೆ ಗ್ಯಾರಂಟಿ ಯೋಜನೆಗಳ ಕೊಡುಗೆಯೂ ಮಹತ್ವದ್ದಾಗಿದೆ ಎಂದು ಹೇಳಿದರು.

ಮೃತಪಟ್ಟ ಮಹಿಳೆಯ ಖಾತೆಗೆ ಗೃಹಲಕ್ಷ್ಮಿಯೋಜನೆಯ ಹಣ ಪಾವತಿಯಾಗಿರುವುದು ಸಹಜ. ಇದು ದೊಡ್ಡ ಪ್ರಮಾಣದ ಯೋಜನೆ. ಸಣ್ಣ ಪ್ರಮಾಣದ ಲೋಪಗಳು ಇರಬಹುದು. ಪ್ರತಿವಾರ ಸಾವು-ನೋವುಗಳು ಘಟಿಸುತ್ತಿರುತ್ತವೆ. ಆ ಮಾಹಿತಿ ಕಾಲಕಾಲಕ್ಕೆ ಅಪ್‌ಡೇಟ್‌ ಆಗದೇ ಇದ್ದಾಗ ಲೋಪಗಳಾಗುವುದು ಸಾಮಾನ್ಯ. ಸರ್ಕಾರ ಇದನ್ನು ಪತ್ತೆ ಹಚ್ಚಿ ಸೂಕ್ತ ಕ್ರಮಕೈಗೊಳ್ಳಲಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಸಂಧಾನ ಯಶಸ್ವಿ : ಮುಷ್ಕರ ಹಿಂಪಡೆದ ವೈದ್ಯರು

 ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ  (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…

18 mins ago

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

2 hours ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

2 hours ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

3 hours ago

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

3 hours ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

3 hours ago