ಬೆಂಗಳೂರು: ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಅಂಗವಾಗಿ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ ದೆಹಲಿಯ ವಿಜ್ಞಾನ ಭವನದಲ್ಲಿ ಡಿಸೆಂಬರ್.14ರಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕ್ರೆಡಲ್‌ನ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ ಈ ಪ್ರಶಸ್ತಿ ಸ್ವೀಕರಿಸಿದರು.
ವಿವಿಧ ರಾಜ್ಯಗಳಲ್ಲಿ ಇಂಧನ ದಕ್ಷತೆಗೆ ರಾಜ್ಯಗಳಲ್ಲಿ ಜಾರಿಗೊಳಿಸಿರುವ ಕಾರ್ಯಕ್ರಮಗಳ ಕುರಿತಂತೆ ಆಯಾ ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳಿಂದ ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ ಈ ಪ್ರಶಸ್ತಿ ನೀಡಲಾಗುತ್ತದೆ. ಇಂಧನ ದಕ್ಷತೆಯಲ್ಲಿ ಉತ್ತಮ ಸಾಧನೆ ಮಾಡಿರುವ ಕರ್ನಾಟಕಕ್ಕೆ ಈ ಬಾರಿ ಎರಡನೇ ಸ್ಥಾನ ದೊರೆತಿದೆ.
ರಾಜ್ಯಾದ್ಯಂತ ಸುಸ್ಥಿರ ಇಂಧನ ಪದ್ಧತಿಗಳನ್ನು ಉತ್ತೇಜಿಸುವ ಕ್ರೆಡಲ್, ಈ ನಿಟ್ಟಿನಲ್ಲಿ ಅನುಷ್ಠಾನಗೊಳಿಸಿರುವ ಇಂಧನ ದಕ್ಷತೆ ಯೋಜನೆಗಳನ್ನು ಗುರುತಿಸಿ ಕೇಂದ್ರ ಇಂಧನ ಸಚಿವಾಲಯ ಈ ಪ್ರಶಸ್ತಿ ನೀಡಿದೆ.
ಸಂತಸ ವ್ಯಕ್ತಪಡಿಸಿದ ಇಂಧನ ಸಚಿವ ಕೆ.ಜೆ. ಜಾರ್ಜ್:
ಇಂಧನ ಸಂರಕ್ಷಣೆಯಲ್ಲಿ ರಾಜ್ಯಕ್ಕೆ ರಾಷ್ಟ್ರಮಟ್ಟದಲ್ಲಿ ಎರಡನೇ ಪ್ರಶಸ್ತಿ ಸಂದಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಇಂಧನ ಸಚಿವ ಕೆ.ಜೆ. ಜಾರ್ಜ್, “ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನದ ಸವಾಲುಗಳನ್ನು ಎದುರಿಸುವಲ್ಲಿ ಇಂಧನ ಸಂರಕ್ಷಣೆ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ. ಇಂಧನ ಸಂರಕ್ಷಣೆ, ಸ್ವಚ್ಛ ಮತ್ತು ಹಸಿರು ಇಂಧನದ ಉಪಕ್ರಮಗಳಿಗೆ ನಮ್ಮ ಸರ್ಕಾರ ಒತ್ತು ನೀಡುತ್ತದೆ. ಇಂಧನ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸುವುದರ ಜತೆಗೆ ಇನ್ನೂ ಹೆಚ್ಚಿನ ದಕ್ಷತೆ ಸಾಧಿಸುವ ಬಗ್ಗೆ ಗಮನ ಹರಿಸಲಾಗುವುದು,” ಎಂದು ಸಚಿವರು ತಿಳಿಸಿದ್ದಾರೆ.
“ಇಂಧನ ದಕ್ಷತೆಯ ನೀತಿಗಳ ಅನುಷ್ಠಾನದಲ್ಲಿ ರಾಜ್ಯಗಳು ಪ್ರಮುಖ ಪಾತ್ರ ವಹಿಸುತ್ತವೆ. ಈ ನಿಟ್ಟನಿಲ್ಲಿ ಸರಿಯಾದ ಪದ್ಧತಿಗಳನ್ನು ಅನುಸರಿಸುವ ಮೂಲಕ ಸುಸ್ಥಿರ ಅಭಿವೃದ್ಧಿಯ ಗುರಿಗಳನ್ನು ಸಾಧಿಸಲು ರಾಜ್ಯ ಬದ್ಧವಾಗಿದೆ”, ಎಂದು ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಹೇಳಿದ್ದಾರೆ.
ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…
ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…
ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…