Mysore
17
few clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಕೇಂದ್ರ ಬಜೆಟ್‌ ಪೂರ್ವ ಸಭೆಯಲ್ಲಿ 11,495 ಕೋಟಿ ರೂ ವಿಶೇಷ ಅನುದಾನ ಕೇಳಿದ ಕರ್ನಾಟಕ

ಬೆಂಗಳೂರು: ಕೇಂದ್ರ ಬಜೆಟ್‌ ಪೂರ್ವ ಸಮಾಲೋಚನೆ ಸಭೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ 11.495 ಕೋಟಿ ರೂ. ವಿಶೇಷ ಅನುದಾನವನ್ನು ರಾಜ್ಯ ಸರ್ಕಾರ ಕೇಳಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಫೆ.1ರಂದು 2025-26ನೇ ಸಾಲಿನ ಕೇಂದ್ರ ಬಜೆಟ್‌ ಮಂಡಿಸಲಿದ್ದು, ಈ ಹಿನ್ನಲೆಯಲ್ಲಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಬೇಡಿಕೆ ಮತ್ತು ಸಲಹೆಗಳನ್ನು ಪಡೆಯಲು ಕಳೆದ ತಿಂಗಳು ಹಣಕಾಸು ಸಚಿವರ ಸಭೆ ನಡೆಸಿದ್ದರು.

ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರರ ಪರವಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಮಧ್ಯ ಕರ್ನಾಟಕಕ್ಕೆ ನೀರು ಒದಗಿಸಲು ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಮತ್ತು ಕಲ್ಯಾಣ ಕರ್ನಾಟಕದ ಹಿಂದುಳಿದ ಪ್ರದೇಶ ಮತ್ತು ಜಾಗತಿಕ ಪರಿಸರ ಸೂಕ್ಷ್ಮ ಪಶ್ಚಿಮ ಘಟ್ಟಗಳ ಅಭಿವೃದ್ದಿಗೆ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಕೋರಿದ್ದಾರೆ.

ಕೇಂದ್ರ ಪ್ರಾಯೋಜಿತ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಒತ್ತಾಯಿಸಿತ್ತು. ಆಶಾ ಕರ್ಯಕರ್ತೆಯರಿಗೆ ಅವರ ಗೌರವಧನ ಕೇಂದ್ರದ ಪಾಲು ತಿಂಗಳಿಗೆ 5,000ರೂ. ಮತ್ತು ಅಂಗನವಾಡಿ ಸಹಾಯಕಿಯರ ಗೌರವಧನ 2000ರೂ.ಗೆ ಹೆಚ್ಚಿಸುವಂತೆ ಮನವಿ ಮಾಡಿದ್ದಾರೆ.

ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರ ಕಚೇರಿಯಿಂದ ಮಾಹಿತಿ ಹಂಚಿಕೊಂಡ ಪ್ರಕಾರ, ನಗರದ ಮನೆಗಳಿಗೆ ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ ಸಹಾಯಧನವನ್ನು 5ಲಕ್ಷ ರೂ.ಗಳಿಗೆ ಮತ್ತು ಗ್ರಾಮೀಣ ಮನೆಗಳಿಗೆ 3ಲಕ್ಷ ರೂ. ಗಳಿಗೆ ಹೆಚ್ಚಿಸುವಂತೆ ರಾಜ್ಯ ಸರ್ಕಾರ ಒತ್ತಾಯಿಸಿದೆ.

 

Tags:
error: Content is protected !!