ಬೆಂಗಳೂರು: ಕೇಂದ್ರ ಬಜೆಟ್ ಪೂರ್ವ ಸಮಾಲೋಚನೆ ಸಭೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ 11.495 ಕೋಟಿ ರೂ. ವಿಶೇಷ ಅನುದಾನವನ್ನು ರಾಜ್ಯ ಸರ್ಕಾರ ಕೇಳಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆ.1ರಂದು 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಲಿದ್ದು, ಈ ಹಿನ್ನಲೆಯಲ್ಲಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಬೇಡಿಕೆ ಮತ್ತು ಸಲಹೆಗಳನ್ನು ಪಡೆಯಲು ಕಳೆದ ತಿಂಗಳು ಹಣಕಾಸು ಸಚಿವರ ಸಭೆ ನಡೆಸಿದ್ದರು.
ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರರ ಪರವಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಮಧ್ಯ ಕರ್ನಾಟಕಕ್ಕೆ ನೀರು ಒದಗಿಸಲು ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಮತ್ತು ಕಲ್ಯಾಣ ಕರ್ನಾಟಕದ ಹಿಂದುಳಿದ ಪ್ರದೇಶ ಮತ್ತು ಜಾಗತಿಕ ಪರಿಸರ ಸೂಕ್ಷ್ಮ ಪಶ್ಚಿಮ ಘಟ್ಟಗಳ ಅಭಿವೃದ್ದಿಗೆ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಕೋರಿದ್ದಾರೆ.
ಕೇಂದ್ರ ಪ್ರಾಯೋಜಿತ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಒತ್ತಾಯಿಸಿತ್ತು. ಆಶಾ ಕರ್ಯಕರ್ತೆಯರಿಗೆ ಅವರ ಗೌರವಧನ ಕೇಂದ್ರದ ಪಾಲು ತಿಂಗಳಿಗೆ 5,000ರೂ. ಮತ್ತು ಅಂಗನವಾಡಿ ಸಹಾಯಕಿಯರ ಗೌರವಧನ 2000ರೂ.ಗೆ ಹೆಚ್ಚಿಸುವಂತೆ ಮನವಿ ಮಾಡಿದ್ದಾರೆ.
ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರ ಕಚೇರಿಯಿಂದ ಮಾಹಿತಿ ಹಂಚಿಕೊಂಡ ಪ್ರಕಾರ, ನಗರದ ಮನೆಗಳಿಗೆ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಸಹಾಯಧನವನ್ನು 5ಲಕ್ಷ ರೂ.ಗಳಿಗೆ ಮತ್ತು ಗ್ರಾಮೀಣ ಮನೆಗಳಿಗೆ 3ಲಕ್ಷ ರೂ. ಗಳಿಗೆ ಹೆಚ್ಚಿಸುವಂತೆ ರಾಜ್ಯ ಸರ್ಕಾರ ಒತ್ತಾಯಿಸಿದೆ.
ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…
ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…
ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ…
ಬೆಳಗಾವಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಕೂಡ ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.…
ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.…