ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಟೆಲಿಪ್ರಾಂಪ್ಟರ್ ಸಹಾಯವಿಲ್ಲದೇ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಷಣ ಮಾಡಲಾರರು ಎಂದು ಕಾಂಗ್ರೆಸ್ ಮತ್ತೊಮ್ಮೆ ಆರೋಪಿಸಿದೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್ ಪಕ್ಷವೂ, ಪ್ರಧಾನಿ ನರೇಂದ್ರ ಮೋದಿ ಅವರು ಟೆಲಿಪ್ರಾಂಪ್ಟರ್ ಇಲ್ಲದೆ ಒಂದೇ ಒಂದು ಶಬ್ದ ಸಹ ಮಾತನಾಡಲು ಸಾಧ್ಯವೇ ಇಲ್ಲ ಎಂದು ಮೋದಿ ಅವರ ದೆಹಲಿ ಚುನಾವಣಾ ಪ್ರಚಾರ ಕಾರ್ಯಕ್ರಮದ ವೀಡಿಯೋ ಹಂಚಿಕೊಂಡು ವಾಗ್ದಾಳಿ ನಡೆಸಿದೆ.
ದೆಹಲಿಯಲ್ಲಿ ಚುನಾವಣಾ ಪ್ರಚಾರ ಭಾಷಣದ ವೇಳೆ ಟೆಲಿಪ್ರಾಂಪ್ಟರ್ ಕೈಕೊಟ್ಟಾಗ ಮೋದಿಯಿಂದ ‘ಮೌನವೃತ’ ಆಚರಣೆಯಾಗುತ್ತದೆ. ಆದರೆ ನರೇಂದ್ರ ಮೋದಿ ಅವರು ಟೆಲಿಪ್ರಾಂಪ್ಟರ್ ಇಲ್ಲದೆ ಒಂದು ಶಬ್ದ ಕೂಡ ಮಾತಾಡಲು ಸಾಧ್ಯವೇ ಇಲ್ಲ. ಏಕೆಂದರೆ ಮೋದಿ ಒಳಗಡೆ ಏನೂ ಇಲ್ಲ ಎಂದು ಕಿಡಿಕಾರಿದೆ.





