ಬೆಂಗಳೂರು : SSLC ಪರೀಕ್ಷೆ -೨ ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇಂದು ಬಿಡುಗಡೆ ಮಾಡಿದ್ದು, ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಫಲಿತಾಂಶಗಳನ್ನ ಪರಿಶೀಲನೆ ಮಾಡಬಹುದಾಗಿದೆ.
ಕರ್ನಾಟಕ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯನ್ನ ಜೂನ್ ೧೪ ಮತ್ತು ಜೂನ್ ೨೧ ರ ಅವಧಿಯಲ್ಲಿ ನಡೆದಿದ್ದವು. ೧.೨೯ ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಜೂನ್ ೧೪ ರಿಂದ ಜೂನ್ ೨೧ರವೆರೆಗೆ ಕರ್ನಾಟಕದ ೭೨೪ ಪರೀಕ್ಷಾ ಕೇಂದ್ರಗಳಲ್ಲಿ ಪೂರಕ ಪರೀಕ್ಷೆಗಳು ನಡೆದಿದ್ದವು. ಏಳು ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದ್ದು, ಸುಮಾರು ೧೩೦೮೫ ವಿದ್ಯಾರ್ಥಿಗಳು ಅಂಕ ಹೆಚ್ಚಿಸಿಕೊಳ್ಳುವುದಕ್ಕಾಗಿ ಎರಡನೇ ಪರೀಕ್ಷೆ ಹೆಸರು ನೊಂದಾಯಿಸಿಕೊಂಡಿದ್ದರು. ಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣವಾಗದ ಅಥವಾ ಇನ್ನೂ ಹೆಚ್ಚಿನ ಅಂಕಗಳನ್ನ ಬಯಸಿದ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಿದ್ದರು.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಾಪನ ಮಂಡಳಿಯ ಅಧಿಕೃತ ವೆಬ್ ಸೈಟ್ keab.karnataka.gov.in ಮತ್ತು karresults.nic.in ನಲ್ಲಿ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಪರಿಶೀಲಿಸಬಹುದಾಗಿದೆ.
ಹೈದರಾಬಾದ್: ಅಭಿಷೇಕ್ ಶರ್ಮಾ ಅವರ ಅಮೋಘ ಶತಕ, ಟ್ರಾವಿಸ್ ಹೆಡ್ ಅವರ ಅರ್ಧಶತಕದ ಬಲದಿಂದಾಗಿ ಪಂಜಾಬ್ ಕಿಂಗ್ಸ್ ವಿರುದ್ಧ 245…
ಮೈಸೂರು: ಕಾರಿನ ಟೈರ್ ಸಿಡಿದು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೇಟಗಳ್ಳಿಯ ಆರ್ಬಿಐ…
ಮಂಗಳೂರು: ಈ ವರ್ಷದಿಂದ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಕ್ರೀಡಾಕೂಟದಲ್ಲೂ ಕಂಬಳವನ್ನು ಸೇರಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ…
ಬೆಳಗಾವಿ: ಜನರ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿಗತಿ ಅರಿಯಲು ಜಾತಿಗಣತಿ ಅಗತ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಸ್ಥಾನ…
ಬೆಳಗಾವಿ: ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರಿಗೆ ನಮ್ಮನ್ನು ಪ್ರಶ್ನಿಸುವ ನೈತಿಕತೆ ಇಲ್ಲ…
ಹನೂರು: ತಾಲೂಕಿನ ಪ್ರಸಿದ್ದ ಧಾರ್ಮಿಕ ಸ್ಥಳವಾದ ಮಲೆಮಹದೇಶ್ವರ ಬೆಟ್ಟದ ಮಲೆಮಹದೇಶ್ವರ ಸ್ವಾಮಿ ದೇವಾಲಯದ ಗೋಪುರದ ಮೇಲೆ ಏರಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ…