ಫೆಬ್ರವರಿ 12ರಿಂದ 23ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಫೆಬ್ರವರಿ 16ರಂದು ಬಜೆಟ್ ಮಂಡನೆಯಾಗಲಿದೆ.
ವಿಧಾನಮಂಡಲ ಅಧಿವೇಶನದ ಮೊದಲ ದಿನ ( ಫೆಬ್ರವರಿ 12 ) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದಾರೆ. ಮುಂದೆ ಲೋಕಸಭೆ ಚುನಾವಣೆ ಬರಲಿದ್ದು ಮಾರ್ಚ್ ತಿಂಗಳಿನಿಂದಲೇ ನೀತಿಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಫೆಬ್ರವರಿಯಲ್ಲಿಯೇ ಬಜೆಟ್ ಮಂಡಿಸಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿದೆ.
ಇನ್ನು ಮುಂಬರುವ ಲೋಕಸಭೆ ಚುನಾವಣೆಯನ್ನು ತಲೆಯಲ್ಲಿಟ್ಟುಕೊಂಡು ಸಿದ್ದರಾಮಯ್ಯ ಏನೆಲ್ಲಾ ಯೋಜನೆಗಳನ್ನು ಈ ಬಜೆಟ್‌ನಲ್ಲಿ ಘೋಷಿಸಬಹುದು ಎಂಬ ಕುತೂಹಲ ಉಂಟಾಗಿದೆ. ಮತ್ತೊಂದೆಡೆ ಸರ್ಕಾರದಲ್ಲಿ ಈಗಾಗಲೇ ಅನುದಾನದ ಕೊರತೆ ಉಂಟಾಗಿದ್ದು ಹೊಸ ಹೊಸ ಘೋಷಣೆಯನ್ನು ಘೋಷಣೆ ಮಾಡುವ ಸಾಧ್ಯತೆ ಕಡಿಮೆ ಎಂದೇ ಹೇಳಬಹುದು.