ರಾಜ್ಯ

ಪ್ರಧಾನಿ ಮೋದಿ ವಿರುದ್ಧ ರಾಜ್ಯ ಕಾಂಗ್ರೆಸ್‌ ಕಿಡಿ

ಬೆಂಗಳೂರು: ಒಂದು ಫೋನ್ ಕರೆಯಿಂದ ರಷ್ಯಾ- ಉಕ್ರೇನ್ ಯುದ್ಧ ನಿಲ್ಲಿಸುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚೀನಾದಿಂದ ಆಮದಾಗುತ್ತಿರುವ ಸರಕುಗಳನ್ನು ನಿಷೇಧಿಸುವ ಧೈರ್ಯವಿಲ್ಲವೇ? ಎಂದು ರಾಜ್ಯ ಕಾಂಗ್ರೆಸ್‌ ಕಿಡಿಕಾರಿದೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್‌ ಪಕ್ಷ, ಕೇವಲ ಟಿಕ್ ಟಾಕ್, ಶೇರ್ ಚಾಟ್ ನಂತಹ 59 ಚೀನಿ ಆಪ್‌ಗಳನ್ನು ಬ್ಯಾನ್ ಮಾಡಲು ಎಲ್ಲಿಲ್ಲದ ಆಸಕ್ತಿ ತೋರಿದ ಪ್ರಧಾನಿ ಮೋದಿಯವರು, ಚೀನಾದಿಂದ ಆಮದಾಗುತ್ತಿರುವ ಸರಕುಗಳನ್ನು ನಿಷೇಧಿಸುವುದಕ್ಕೆ ಮಾತ್ರ ಹಿಂಜರಿಯುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದೆ.

2013 – 14ರ UPA ಸರ್ಕಾರದ ಅವಧಿಯಲ್ಲಿ ಚೀನಾದಿಂದ ಭಾರತಕ್ಕೆ $51.34 ಬಿಲಿಯನ್ ಮೌಲ್ಯದಷ್ಟು ಸರಕುಗಳು ಆಮದಾಗಿತ್ತು. ಆದರೆ 2023 – 24 ರ ಮೋದಿ ಸರ್ಕಾರದಲ್ಲಿ $101.7 ಬಿಲಿಯನ್ ಮೌಲ್ಯದಷ್ಟು ಸರಕುಗಳು ಆಮದಾಗಿವೆ. ಕೇವಲ 10 ವರ್ಷಗಳಲ್ಲಿ ಚೀನಾದಿಂದ ಆಮದಾಗುತ್ತಿರುವ ಸರಕುಗಳ ಮೌಲ್ಯ 100% ಅಧಿಕವಾಗಿದೆ ಎಂದು ಆರೋಪಿಸಿದೆ.

ಚೀನಾದಿಂದ ಆಮದಾಗುತ್ತಿರುವ ಸರಕುಗಳಿಂದ ಚನ್ನಪಟ್ಟಣದ ಬೊಂಬೆ ತಯಾರಿಸುವಂತಹ ಗುಡಿ ಕೈಗಾರಿಕೆಗಳು, ಸ್ವದೇಶಿ ಉತ್ಪಾದನಾ ವಲಯಕ್ಕೆ ಹೊಡೆತ ಬಿದ್ದಿದ್ದಲ್ಲದೇ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಉದ್ಯಮಗಳು ಹಾಗೂ ಅನೇಕ ಕಾರ್ಖಾನೆಗಳಿಗೆ ಬೀಗ ಬೀಳುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಅರ್ಚನ ಎಸ್‌ ಎಸ್

Recent Posts

ಚಾ.ನಗರ | ಶೆಡ್‌, 4ಸಾವಿರ ಕೋಳಿ ಬೆಂಕಿಗಾಹುತಿ ; 25 ಲಕ್ಷ ನಷ್ಟ

ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕೋಳಿ ಫಾರಂ ಶೆಡ್‌ಗೆ ಬೆಂಕಿ ತಗುಲಿ ಸುಮಾರು 4…

6 hours ago

ಸಿಎನ್‌ಜಿ ಸಮಸ್ಯೆ ಇಲ್ಲ : ಸಚಿವ ಮುನಿಯಪ್ಪ

ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ…

6 hours ago

ಬಲಮುರಿ ಕಾವೇರಿ ನದಿಯಲ್ಲಿ ಮುಳುಗಿ ಯುವಕ ಸಾವು

ಶ್ರೀರಂಗಪಟ್ಟಣ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ…

6 hours ago

ದಿನಗೂಲಿ ನೌಕರರಿಗೂ ಆರೋಗ್ಯ ವಿಮಾ ಸೌಲಭ್ಯ

ಬೆಂಗಳೂರು : ಕರ್ನಾಟಕ ಸರ್ಕಾರವು ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ…

6 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಹೈಕೋರ್ಟ್‌ ಅಸ್ತು

ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್…

6 hours ago

ಜನಗಣತಿಗೆ ಸ್ವಯಂ ಪ್ರೇರಿತರಾಗಿ ಮಾಹಿತಿ ನೀಡಿ ; ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ

ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ…

7 hours ago