ಬೆಂಗಳೂರು: ಕಾಂಗ್ರೆಸ್ ಸರ್ಕಾರ, ತಮ್ಮ ವರಿಷ್ಠರನ್ನು ಮೆರೆಸಲು ಗುಲಾಮರಂತೆ ನಡೆದುಕೊಂಡು ಕನ್ನಡಿಗರ ತೆರಿಗೆ ಹಣವನ್ನು ಪೋಲು ಮಾಡಿ ಬೆಳಗಾವಿ ಅಧಿವೇಶನ ನಡೆಸುತ್ತಿದೆ ಇದಕ್ಕೆ ನಿಮ್ಮ ಆತ್ಮಸಾಕ್ಷಿ ಒಪ್ಪುತ್ತದೆಯೇ ಎಂದು ಜೆಡಿಎಸ್ ಕಿಡಿಕಾರಿದೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್ ಪಕ್ಷವೂ, ಕನ್ನಡಿಗರ ತೆರಿಗೆ ಹಣದಲ್ಲಿ ಕಾಂಗ್ರೆಸ್ ಸಮಾವೇಶದ ಜಾಹೀರಾತು ಕೊಟ್ಟು ಬಿಟ್ಟಿ ಪ್ರಚಾರ ಪಡೆಯುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಮತ್ತು ಕಾಂಗ್ರೆಸ್ಸಿಗರಿಗೆ ನಾಚಿಕೆಯಾಗಬೇಕು ಎಂದು ಟೀಕಿಸಿದೆ.
ಬೆಳಗಾವಿಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸಮಾರಂಭ ಇದಕ್ಕೆ ಮತ್ತೊಂದು ಉದಾಹರಣೆ. ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಹೆಸರಲ್ಲಿ ಕಾಂಗ್ರೆಸ್ ಪಕ್ಷದ ಜಾತ್ರೆ ನಡೆಯುತ್ತಿದೆ ಅಷ್ಟೇ. ಕಾಂಗ್ರೆಸ್ ವರಿಷ್ಠರನ್ನು ಮೆರೆಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಗುಲಾಮರಂತೆ ನಡೆಯುತ್ತಿದೆ. ಕನ್ನಡಿಗರ ತೆರಿಗೆ ಹಣವನ್ನು ಪೋಲು ಮಾಡುವುದಕ್ಕೆ ನಿಮ್ಮ ಆತ್ಮಸಾಕ್ಷಿ ಒಪ್ಪುತ್ತದೆಯೇ “ಸ”ಮಜಾವಾದಿ ಸಿದ್ದರಾಮಯ್ಯ ಎಂದು ವಾಗ್ದಾಳಿ ನಡೆಸಿದೆ.
ಹಾಲಿನ ದರ ಏರಿಕೆ- ಜೆಡಿಎಸ್ ವಾಗ್ದಾಳಿ
ಬೆಲೆ ಏರಿಕೆಯ ಕಾಂಗ್ರೆಸ್ ಸರ್ಕಾರ ಮತ್ತೆ ರಾಜ್ಯದ ಜನರ ಜೇಬಿಗೆ ಕನ್ನ ಹಾಕಲು ಸಿದ್ಧವಾಗಿದೆ. ಮತ್ತೊಮ್ಮೆ ಹಾಲಿನ ದರವನ್ನು 5 ರೂ. ಹೆಚ್ಚಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ವಾಗ್ದಾಳಿ ನಡೆಸಿದೆ.
ಜುಲೈ ತಿಂಗಳಿನಲ್ಲಿ 2 ರೂ. ಏರಿಕೆ ಮಾಡಿ 50 ML ಹೆಚ್ಚುವರಿ ನೀಡುತ್ತಿದ್ದ ಹಾಲನ್ನು ಕಡಿತಗೊಳಿಸುವ ಮೂಲಕ ದರ ಪರಿಷ್ಕರಣೆ ಮಾಡುತ್ತಿದೆ. ಅಲ್ಲದೇ ಅವೈಜ್ಞಾನಿಕ ಗ್ಯಾರಂಟಿಯಿಂದ ದಿವಾಳಿಯಾಗಿರುವ ಖಾಲಿ “ಕೈ” ಸರ್ಕಾರ ಒಂದು ಕೈಯಲ್ಲಿ ಕೊಟ್ಟು, ಮತ್ತೊಂದು ಕೈಯಲ್ಲಿ ಕಿತ್ತುಕೊಳ್ಳುವುದನ್ನು ಕರಗತ ಮಾಡಿಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಹಾಲು ಉತ್ಪಾದಕರ ಬಾಕಿ ಉಳಿಸಿಕೊಂಡಿರುವ 9 ತಿಂಗಳ ಹಾಲಿನ ಪ್ರೋತ್ಸಾಹ ಧನ ಕೊಡಲು ಯೋಗ್ಯತೆ ಇಲ್ಲದ ರೈತವಿರೋಧಿ ಸರ್ಕಾರ. ಜನರಿಂದಲೂ ಸುಲಿಗೆ ಮಾಡಿ, ರೈತರಿಗೂ ಕೊಡದೆ ವಂಚಿಸುತ್ತಿರುವ ವಚನ ಭ್ರಷ್ಟ ಕಾಂಗ್ರೆಸ್ ಸರ್ಕಾರ ಲೂಟಿ ಹೊಡೆಯಲು ಮತ್ತೆ ದರ ಏರಿಸಲು ಹೊರಟಿದೆ ಎಂದು ಕಿಡಿಕಾರಿದೆ.
ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…
ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…
‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…
ನಾನು ಎ.ಐ. ಅಥವಾ ಕೃತಕ ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ.…
ಮಾನವ ದುಡಿಮೆಯನ್ನು ಕಡಿಮೆಗೊಳಿಸಿರುವ ಎಐಯನ್ನು ಸಂಪೂರ್ಣವಾಗಿ ಹೀಗಳೆಯುವಂತೆಯೂ ಇಲ್ಲ. ಮನುಷ್ಯ ನಿರ್ಮಿತ ಈ ಕೃತಕ ಬುದ್ಧಿಯ ಬೇತಾಳ ನಮ್ಮದೇ ಕೂಸು!…
೧೮೭೫ರಲ್ಲಿ ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿದ ‘ವಂದೇ ಮಾತರಂ’ ಸ್ವಾತಂತ್ರ್ಯ ಚಳವಳಿಯ ಭಾಗವಾಗಿತ್ತು. ಧಾರ್ಮಿಕ ಆಕ್ಷೇಪಣೆಗಳಿಂದಾಗಿ ೧೯೩೭ರಲ್ಲಿ ಕಾಂಗ್ರೆಸ್ ಮೊದಲ ಎರಡು…