Mysore
29
few clouds

Social Media

ಶುಕ್ರವಾರ, 13 ಮಾರ್ಚ್ 2026
Light
Dark

ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ 5 ದಿನ ಭಾರೀ ಮಳೆ ಮುನ್ಸೂಚನೆ

rainy days

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳ್ಲಲಿ ಸಾಧಾರಣ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ.

ಜೂನ್.‌4ರಿಂದ ರಾಜ್ಯದಲ್ಲಿ ಮಳೆಯ ಅಬ್ಬರ ಮತ್ತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Tags:
error: Content is protected !!