ರಾಜ್ಯ

ಇವಿ ಹಬ್ ಆಗಿ ಕರ್ನಾಟಕ ರೂಪಾಂತರ ; ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ವಿಶ್ವಾಸ

ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ ಕೇಂದ್ರದ ನರೇಂದ್ರ ಮೋದಿ ಅವರ ಸರಕಾರವು ದೊಡ್ಡ ಪ್ರಮಾಣದಲ್ಲಿ ಉತ್ತೇಜನ ನೀಡುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.

ಬೆಂಗಳೂರಿನಲ್ಲಿ ಶನಿವಾರದಂದು ನ್ಯೂಸ್ ಫಸ್ಟ್ ಸುದ್ದಿವಾಹಿನಿ ಆಯೋಜಿಸಿದ್ದ ಎಲೆಕ್ಟ್ರಿಕ್ ವಾಹನಗಳ ಇವಿ ಎವರೆಡಿ 2026 ಬೃಹತ್ ಮೇಳವನ್ನು ಉದ್ಘಾಟಿಸಿ ಮಾತಾಡಿದರು ಕೇಂದ್ರ ಸಚಿವರು.

ಕರ್ನಾಟಕದಲ್ಲಿ ಎಲೆಕ್ಟ್ರಿಕ್ ವಾಹನ ಉದ್ಯಮಕ್ಕೆ ವಿಪುಲ ಅವಕಾಶಗಳಿವೆ. ಅನೇಕ ದೊಡ್ಡ ಕಂಪನಿಗಳು ರಾಜ್ಯವನ್ನು ಕಾರ್ಯಕ್ಷೇತ್ರ ಮಾಡಿಕೊಂಡಿವೆ. ಎಲೆಕ್ಟ್ರಾನಿಕ್ಸ್, ಆಟೋಮೋಟಿವ್ ಎಂಜಿನಿಯರಿಂಗ್ ಮತ್ತು ಸ್ಟಾರ್ಟ್ಅಪ್‌ಗಳಲ್ಲಿ ಬೆಂಗಳೂರಿನ ಬಲವಾದ ನೆಲೆಯು ಇವಿ ವಾಹನಗಳ ನಾವೀನ್ಯತೆ ಮತ್ತು ಉತ್ಪಾದನೆಗೆ ಜಾಗತಿಕ ಕೇಂದ್ರವಾಗಿ ರಾಜ್ಯವು ಹೊರಹೊಮ್ಮಲು ಸಹಕಾರಿ ಆಗಿದೆ ಎಂದು ಅವರು ಒತ್ತಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತದ ಎಲೆಲೆಕ್ಟ್ರಿಕ್ ವಾಹನಗಳ ಚಲನಶೀಲತೆಯ ಪರಿವರ್ತನಾತ್ಮಕ ವೇಗವನ್ನು ಪಡೆದುಕೊಳ್ಳುತ್ತಿದ್ದು, ಜಾಗತಿಕ ಸ್ಪರ್ಧೆಗೆ ಅನುಗುಣವಾಗಿ ಗುಣಾತ್ಮಕವಾಗಿ ಬೆಳವಣಿಗೆ ಹೊಂದುತ್ತಿದೆ. ಭಾರತದಲ್ಲಿ ವೇಗವಾಗಿ ಇವಿ ಪೂರಕ ವ್ಯವಸ್ಥೆಯ ಬೆಳೆಯುತ್ತಿದೆ. ಈ ವಲಯದಲ್ಲಿ ನಾವೀನ್ಯತೆ ಮತ್ತು ಆವಿಷ್ಕಾರಕ್ಕೆ ದೊಡ್ಡ ಮಟ್ಟದಲ್ಲಿ ಉತ್ತೇಜನ ಸಿಗುತ್ತಿದೆ ಎಂದು ಅವರು ಹೇಳಿದರು.

ಭಾರತವು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕ ಶಕ್ತಿಯಾಗಿದೆ. ಈ ಬೆಳವಣಿಗೆಗೆ ಎಲೆಕ್ಟ್ರಿಕ್ ವಾಹನ ಕ್ಷೇತ್ರವು ಬೃಹತ್ ಕೊಡುಗೆ ನೀಡುತ್ತಿದೆ. ಕೇಂದ್ರ ಸರ್ಕಾರವು ಅನೇಕ ಪ್ರೋತ್ಸಾಹಕ ಯೋಜನೆಗಳನ್ನು ಅನುಷ್ಠಾನ ಮಾಡುವ ಮೂಲಕ ಈ ಉದ್ಯಮಕ್ಕೆ ಬೆಂಬಲವಾಗಿ ನಿಂತಿದೆ ಎಂದು ಅವರು ವಿವರಿಸಿದರು.

“ಎಲೆಕ್ಟ್ರಿಕ್ ವಾಹನಗಳು ಭಾರತೀಯ ಚಲನಶೀಲತೆಯ ಪರಿವರ್ತನಾತ್ಮಕ ಬೆಳವಣಿಗೆಯ ಅತಿ ಮುಖ್ಯ ಘಟ್ಟವಾಗಿದೆ. ವಿದ್ಯುತ್ ಚಾಲಿತ ವಾಹನಗಳು ಕೇವಲ ಸ್ವಚ್ಛ ಸಾರಿಗೆಗೆ ಪೂರಕ ಮಾತ್ರವಲ್ಲ; ಅವು ಇಂಧನ ಸುರಕ್ಷತೆ, ತಾಂತ್ರಿಕ ನಾಯಕತ್ವ ಮತ್ತು ನಮ್ಮ ಯುವಕರಿಗೆ ಹೊಸ ಆರ್ಥಿಕ ಅವಕಾಶಗಳನ್ನು ವಿಪುಲವಾಗಿ ತೆರೆಯುತ್ತವೆ” ಎಂದು ಕೇಂದ್ರ ಸಚಿವರು ಪ್ರತಿಪಾದಿಸಿದರು.

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ರೂಪಿಸಲಾದ ವಿವಿಧ ನೀತಿಗಳು 2070ರ ವೇಳೆಗೆ ಭಾರತೀಯ ಸಾರಿಗೆ ವ್ಯವಸ್ಥೆಯಲ್ಲಿ ಇಂಗಾಲ ಹೊರಸೂಸುವಿಕೆಯನ್ನು ನಿವ್ವಳ ಶೂನ್ಯಕ್ಕೆ ತರುವ ಉದ್ದೇಶ ಹೊಂದಲಾಗಿದೆ. ಇದು ಅತ್ಯಂತ ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಗುರಿ ಆಗಿದ್ದು, ಅದನ್ನು ಭಾರತ ತಪ್ಪದೇ ಸಾಧಿಸುತ್ತದೆ. ಮೇಕ್ ಇನ್ ಇಂಡಿಯಾ ಮತ್ತು ಆತ್ಮನಿರ್ಭರ ಭಾರತ ಪರಿಕಲ್ಪನೆಯ ಅಡಿಯಲ್ಲಿ ಇವಿ ವಲಯದ ದೇಶೀಯ ಸಾಮರ್ಥ್ಯವನ್ನು ಇಮ್ಮಡಿಗೊಳಿಸಲಾಗುತ್ತಿದೆ ಎಂದು ಸಚಿವರು ಪ್ರತಿಪಾದಿಸಿದರು.

ರೇರ್ ಅರ್ಥ್ ಮೆಟಲ್ ಕ್ಷೇತ್ರಕ್ಕೆ ₹7,280 ಕೋಟ
ಇವಿ ಕ್ಷೇತ್ರ ಮಾತ್ರವಲ್ಲದೆ ರಕ್ಷಣೆ, ಏರೋಸ್ಪೇಸ್, ಆಟೋಮೊಬೈಲ್ ಸೇರಿದಂತೆ ವಿವಿಧ ವ್ಯೂಹಾತ್ಮಕ ಕ್ಷೇತ್ರಗಳಿಗೆ ಶಕ್ತಿ ತುಂಬುವ ಉದ್ದೇಶದಿಂದ ಭೂಮಿಯಲ್ಲಿ ಲಭ್ಯವಿರುವ ಅಪರೂಪದ ಆಯಸ್ಕಾಂತಗಳ ಉತ್ಪಾದನೆ, ಬಳಕೆಗೆ ಉತ್ತೇಜಿಸಲು ₹7,280 ಕೋಟಿ ವೆಚ್ಚದ ಯೋಜನೆಯನ್ನು ಈಗಾಗಲೇ ರೂಪಿಸಲಾಗಿದೆ ಎಂದು ಸಚಿವ ಕುಮಾರಸ್ವಾಮಿ ಅವರು ಹೇಳಿದರು.

ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಬೃಹತ್ ಕೈಗಾರಿಕಾ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಡಾ. ಹನೀಫ್ ಖುರೇಷಿ ಮಾತನಾಡಿ; ಆಟೋಮೊಬೈಲ್ ವಲಯದಲ್ಲಿನ ಪ್ರಗತಿಯ ವೇಗದ ಬಗ್ಗೆ ಮಾಹಿತಿ ನೀಡಿದರು.

ಆಟೋ ಉದ್ಯಮದ ಕೆ. ಎನ್. ರಾಧಾಕೃಷ್ಣನ್, ಸುಮನ್ ಮಿಶ್ರಾ, ಸುಲಜಾ ಪಿರೋಡಿಯಾ ಮತ್ತು ವಾಹಿನಿಯ ವ್ಯವಸ್ಥಾಪಕ ನಿರ್ದೇಶಕ ಎಸ್. ರವಿಕುಮಾರ್ ಸೇರಿದಂತೆ ಪ್ರಮುಖ ಉದ್ಯಮ ಪಾಲುದಾರರು ಈ ಎಕ್ಸ್‌ಪೋದಲ್ಲಿ ಭಾಗವಹಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

8 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

9 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

10 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

13 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

14 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

14 hours ago