Mysore
18
broken clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ವಾಲ್ಮೀಕಿ, ಮುಡಾ ಬೆನ್ನಲ್ಲೇ ಮತ್ತೊಂದು ಹಗರಣ ಬಯಲಿಗೆ: ವಕ್ಫ್‌ ಬೋರ್ಡ್‌ ಹಣ ಗುಳುಂ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣ ಬೆನ್ನಲ್ಲೇ ಕರ್ನಾಟಕ ವಕ್ಫ್‌ ಮಂಡಳಿಯ ಕೋಟ್ಯಾಂತರ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂದು ದೂರು ದಾಖಲಾಗಿದೆ.

ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ವರ್ಷ ಕಳೆಯುತ್ತಿದ್ದಂತೆ ಒಂದರ ಹಿಂದೆ ಒಂದರಂತೆ ಹಗರಣಗಳು ಬೆಳಕಿಗೆ ಬರುತ್ತಿವೆ. ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣ ಬೆನ್ನಲ್ಲೇ ಮತ್ತೊಂದು ಹಗರಣ ಬೆಳಕಿಗೆ ಬಂದಿದೆ. ಕರ್ನಾಟಕ ವಕ್ಫ್‌ ಮಂಡಳಿಯ ಹಣ ಅಕ್ರಮವಾಗಿ ವರ್ಗಾವಣೆಯಾದ ಆರೋಪ ಕೇಳಿಬಂದಿದ್ದು, ಮಾಜಿ ಸಿಇಓ ಝಲ್ಫಿಕಾರುಲ್ಲಾ ವಿರುದ್ಧ ವಕ್ಫ್‌ ಮಂಡಳಿ ದೂರು ನೀಡಿದೆ. ಮಂಡಳಿ ಮುಖ್ಯ ಲೆಕ್ಕಾಧಿಕಾರಿ ಮೀರ್‌ ಅಹಮ್ಮದ್‌ ಅಬ್ಬಾಸ್‌ ಹೈಗ್ರೌಂಡ್‌ ಠಾಣೆಯಲ್ಲಿ ದೂರು ನೀಡಿದ್ದು ಎಫ್‌ಐಆರ್‌ ದಾಖಲಾಗಿದೆ.

ವಕ್ಫ್‌ ಮಂಡಳಿ ಆಸ್ತಿ ಮಾರಾಟ ಸಂಬಂಧ 4 ಕೋಟಿ ರೂ ಹಣ ಮಂಡಳಿ ಬ್ಯಾಂಕ್‌ ಖಾತೆಗೆ ಜಮೆಯಾಗಿದೆ. ಈ ಹಣವನ್ನು ಝಲ್ಫಿಕಾರುಲ್ಲಾ 2016ರಲ್ಲಿ ಚಿಂತಾಮಣಿಯ ವಿಜಯ ಬ್ಯಾಂಕ್‌ಗೆ ಸಿಇಓ ಹೆಸರಿನಲ್ಲಿ ಎರಡು ಚೆಕ್‌ಗಳ ಮೂಲಕ ವರ್ಗಾವಣೆ ಮಾಡಿದ್ದರು. ಇದರಿಂದ ವಕ್ಫ್‌ ಮಂಡಳಿಗೆ 8 ಕೋಟಿ ರೂ ನಷ್ಟವಾಗಿದೆ. ಝಲ್ಫಿಕಾರುಲ್ಲಾ ಅವರು ಮಂಡಳಿಯ ಗಮನಕ್ಕೆ ತರದೇ ಹಣ ವರ್ಗಾವಣೆ ಮಾಡಿ ನಂಬಿಕೆ ದ್ರೋಹ ಮಾಡಿದ್ದಾರೆ ಎಂದು ವಕ್ಫ್‌ ಮಂಡಳಿ ದೂರು ದಾಖಲಿಸಿವೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

Tags: