ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣ ಬೆನ್ನಲ್ಲೇ ಕರ್ನಾಟಕ ವಕ್ಫ್ ಮಂಡಳಿಯ ಕೋಟ್ಯಾಂತರ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂದು ದೂರು ದಾಖಲಾಗಿದೆ.
ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ವರ್ಷ ಕಳೆಯುತ್ತಿದ್ದಂತೆ ಒಂದರ ಹಿಂದೆ ಒಂದರಂತೆ ಹಗರಣಗಳು ಬೆಳಕಿಗೆ ಬರುತ್ತಿವೆ. ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣ ಬೆನ್ನಲ್ಲೇ ಮತ್ತೊಂದು ಹಗರಣ ಬೆಳಕಿಗೆ ಬಂದಿದೆ. ಕರ್ನಾಟಕ ವಕ್ಫ್ ಮಂಡಳಿಯ ಹಣ ಅಕ್ರಮವಾಗಿ ವರ್ಗಾವಣೆಯಾದ ಆರೋಪ ಕೇಳಿಬಂದಿದ್ದು, ಮಾಜಿ ಸಿಇಓ ಝಲ್ಫಿಕಾರುಲ್ಲಾ ವಿರುದ್ಧ ವಕ್ಫ್ ಮಂಡಳಿ ದೂರು ನೀಡಿದೆ. ಮಂಡಳಿ ಮುಖ್ಯ ಲೆಕ್ಕಾಧಿಕಾರಿ ಮೀರ್ ಅಹಮ್ಮದ್ ಅಬ್ಬಾಸ್ ಹೈಗ್ರೌಂಡ್ ಠಾಣೆಯಲ್ಲಿ ದೂರು ನೀಡಿದ್ದು ಎಫ್‌ಐಆರ್ ದಾಖಲಾಗಿದೆ.
ವಕ್ಫ್ ಮಂಡಳಿ ಆಸ್ತಿ ಮಾರಾಟ ಸಂಬಂಧ 4 ಕೋಟಿ ರೂ ಹಣ ಮಂಡಳಿ ಬ್ಯಾಂಕ್ ಖಾತೆಗೆ ಜಮೆಯಾಗಿದೆ. ಈ ಹಣವನ್ನು ಝಲ್ಫಿಕಾರುಲ್ಲಾ 2016ರಲ್ಲಿ ಚಿಂತಾಮಣಿಯ ವಿಜಯ ಬ್ಯಾಂಕ್‌ಗೆ ಸಿಇಓ ಹೆಸರಿನಲ್ಲಿ ಎರಡು ಚೆಕ್‌ಗಳ ಮೂಲಕ ವರ್ಗಾವಣೆ ಮಾಡಿದ್ದರು. ಇದರಿಂದ ವಕ್ಫ್ ಮಂಡಳಿಗೆ 8 ಕೋಟಿ ರೂ ನಷ್ಟವಾಗಿದೆ. ಝಲ್ಫಿಕಾರುಲ್ಲಾ ಅವರು ಮಂಡಳಿಯ ಗಮನಕ್ಕೆ ತರದೇ ಹಣ ವರ್ಗಾವಣೆ ಮಾಡಿ ನಂಬಿಕೆ ದ್ರೋಹ ಮಾಡಿದ್ದಾರೆ ಎಂದು ವಕ್ಫ್ ಮಂಡಳಿ ದೂರು ದಾಖಲಿಸಿವೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…